ಕಲಬುರಗಿ: ಕಳೆದೊಂದು ತಿಂಗಳಿಂದ ಉತ್ತರ ಕರ್ನಾಟಕದ ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸುತ್ತಿದ್ದು, ನಾಗರಿಕರು ಭಯಭೀತಿಗೊಂಡಿದ್ದಾರೆ. ಇಂದು ರಾತ್ರಿ ಕೂಡ ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ ಮತ್ತೆ ಕಂಪನಗೊಂಡಿದೆ.
ಗಡಿಕೇಶ್ವಾರ ಗ್ರಾಮದಲ್ಲಿ ಇಂದು ರಾತ್ರಿ ಸಮಾವೇಶ ನಡೆದಿತ್ತು. ಈ ಸಮಾವೇಶದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕೂಡ ಇದ್ದರು. ಡಾ. ಶರಣಪ್ರಕಾಶ ಪಾಟೀಲ್ ಮಾತನಾಡುತ್ತಿದ್ದಾಗ ಭೂಮಿಯಿಂದ ಭಾರಿ ಶಬ್ದ ಕೇಳಿ ಬಂದಿದೆ. ಅಷ್ಟೇ ಅಲ್ಲದೆ ಭೂಮಿ ಕಂಪಿಸಿದ ಅನುಭವಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ.
PublicNext
12/10/2021 09:16 pm