ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೆಹಲಿಯಲ್ಲಿ ಮಿತಿಮೀರಿದೆ ವಾಯು ಮಾಲಿನ್ಯ: ಶಾಲೆಗಳಿಗೆ ರಜೆ

ನವದೆಹಲಿ: ದೆಹಲಿ ಮಹಾನಗರದಲ್ಲಿ ವಾಯುಮಾಲಿನ್ಯ ಮತ್ತೆ ಮಿತಿಮೀರಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಒಂದು ವಾರ ಕಾಲ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಹಾಗೂ ಸರ್ಕಾರಿ ನೌಕರರಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಆದೇಶ ನೀಡಿದ್ದಾರೆ.

ರಾಜಧಾನಿಯಲ್ಲಿ ಉಸಿರುಗಟ್ಟಿಸುವ ವಾತಾವರಣ ಸೃಷ್ಟಿಯಾಗಿದೆ. ಕಾರಣ ಜನರಿಗೆ ಸ್ವಲ್ಪ ರಿಲೀಫ್ ನೀಡುವ ಪ್ರಯತ್ನದಲ್ಲಿ, ಎಲ್ಲಾ ಶಾಲೆಗಳನ್ನು ಒಂದು ವಾರ ಮುಚ್ಚಲಾಗುವುದು, ನವೆಂಬರ್ 14 ರಿಂದ 17 ರ ನಡುವೆ ಎಲ್ಲಾ ಕಟ್ಟಡ ನಿರ್ಮಾಣ ಚಟುವಟಿಕೆಗಳನ್ನು ಮತ್ತು ಎಲ್ಲಾ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಿ ಮನೆಯಿಂದಲೇ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ ಎಂದು ದೆಹಲಿ ಸರ್ಕಾರ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕ್ರಮಗಳು ರಸ್ತೆಗಳಲ್ಲಿ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು ಒಟ್ಟಾರೆ ಮಾಲಿನ್ಯಕ್ಕೆ ವಾಹನ ಮಾಲಿನ್ಯದ ಕೊಡುಗೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿವೆ. ನಿರ್ಮಾಣ ಚಟುವಟಿಕೆಗಳ ನಿಷೇಧವು ಧೂಳಿನ ಮಾಲಿನ್ಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

Edited By : Nagaraj Tulugeri
PublicNext

PublicNext

14/11/2021 07:53 am

Cinque Terre

58.19 K

Cinque Terre

8

ಸಂಬಂಧಿತ ಸುದ್ದಿ