ದಾವಣಗೆರೆ: ಹೊನ್ನಾಳಿ-ನ್ಯಾಮತಿ ತಾಲೂಕಿನ ಜನರು ಮಳೆ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ. ಮಳೆಹಾನಿ ಪ್ರದೇಶಗಳಿಗೆ ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲಿಸಿದರು.
ಕುಂದೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಕುಂದೂರು, ಕೂಲಂಬಿ ಮುಕ್ತೇನಹಳ್ಳಿ, ಯರೇ ಚಿಕ್ಕನಹಳ್ಳಿ, ಬನ್ನಿಕೋಡು, ಕೆಂಗಲಹಳ್ಳಿ, ತಿಮ್ಮೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಹಾನಿಗೀಡಾದ ಪ್ರದೇಶಗಳ ವೀಕ್ಷಿಸಿದ್ದಾರೆ.
ಕುಂದೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ 2000ಕ್ಕೂ ಹೆಚ್ಚು ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆ ಹಾನಿ ವೀಕ್ಷಿಸಿದ ರೇಣುಕಾಚಾರ್ಯ ಅವರಿಗೆ ವಿವಿಧ ಇಲಾಖೆಯ ಅಧಿಕಾರಿಗಳು ಸಾಥ್ ನೀಡಿದರು. ಬೆಳೆ ಹಾಗೂ ಮನೆ ಕಳೆದುಕೊಂಡವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವುದಾಗಿ ರೇಣುಕಾಚಾರ್ಯ ಭರವಸೆ ನೀಡಿದರು.
ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಎಡೆಬಿಡದೆ ಸುರಿದ ಮಳೆಗೆ ಸುಮಾರು 6 ಕೋಟಿ 94 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. 65 ಮಿ.ಮೀ. ಸರಾಸರಿ ಮಳೆಯಾಗಿದೆ.
PublicNext
20/05/2022 06:47 pm