ರಾಮನಗರ: ನಮ್ಮ ಸರಕಾರ ಬಂದಾಗಲೆಲ್ಲ ರಾಜ್ಯದಲ್ಲಿ ನೀರಿಗೆ ಮಳೆಗೆ ಕೊರತೆ ಆಗಿಲ್ಲ. ರಾಮನಗರ ಜಿಲ್ಲೆ ಒಣ ಭೂಮಿ ಇರುವ ಪ್ರದೇಶ. ಹೀಗಾಗಿ ಇಲ್ಲಿ ಸಣ್ಣ ಮಟ್ಟದ ಪ್ರವಾಹ ಬಂದಿದೆ. ಕೆಲವೆಡೆ ಹಾನಿಯಾಗಿದೆ. ಈಗಾಗಲೇ ಸರ್ಕಾರದಿಂದ ಪರಿಹಾರ ಕೊಡುವಂತಹ ಕೆಲಸ ಮಾಡಲಾಗುತ್ತಿದೆ ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ಮಾಗಡಿ ತಾಲೂಕಿನ ಸಂಕೀಘಟ್ಟದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಉತ್ತಮ ಮಳೆ ಆಗುತ್ತಿದೆ. ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮನೆಗಳಿಗೆ, ಜಮೀನುಗಳಲ್ಲಿ ಹಾನಿಯಾಗಿದೆ. ಹಾನಿಗೊಳಗಾಗದ ಎಲ್ಲ ಸಂತ್ರಸ್ತರಿಗೆ ಸೂಕ್ತ ಪರಿಹಾರ ಸಿಗಲಿದೆ ಎಂದು ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
PublicNext
09/08/2022 09:42 am