ಕೊಡಗಿನಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಅವಕಾಶ ಕೊಟ್ಟರೆ ಹೆಣ ಬೀಳೋದು ಪಕ್ಕಾ ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಡಗಿನ ಭಾಗದಲ್ಲಿ ಎಷ್ಟು ಕೊಲೆಗಳಾಗಿವೆ ಗೊತ್ತಾ...? ಎಲ್ಲೆಂಲ್ಲಿಂದ ಬಂದು ಕೊಲೆ ಮಾಡಿದ್ದಾರೆ ಗೊತ್ತಾ? ಕೇರಳದ ಗಡಿ ದಾಟಿ ಬಂದು ಕೊಲೆ ಮಾಡಿ ಹೋಗುತ್ತಾರೆ, ಅದಕ್ಕೆ ಸಾಕಷ್ಟು ಅವಕಾಶಗಳಿವೆ .ಅದಕ್ಕೆ ಕಡಿವಾಣ ಹಾಕಬೇಕು ಎಂದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಕಾಂಗ್ರೆಸ್ ಕಾರ್ಯಕರ್ತನೇ ಮೊಟ್ಟೆ ಎಸೆದಿದ್ದಾನೆ,ಆತ ಯಾವುದೋ ವಿಚಾರಕ್ಕೆ ಬೇಸರಗೊಂಡು ಎಸೆದಿದ್ದಾನೆ. ಸ್ವತಃ ಕಾಂಗ್ರೆಸ್ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ನಂಬಿಕೆ ಇಲ್ಲವಾಗಿದೆ ಎಂದು ವಾಗ್ದಾಳಿ ನಡೆಸಿದರು.
PublicNext
23/08/2022 08:13 pm