ದಾವಣಗೆರೆಯಲ್ಲಿ ಆಗಸ್ಟ್ 3 ರಂದು ನಡೆಯುತ್ತಿರುವುದು ಸಿದ್ದರಾಮೋತ್ಸವ ಅಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ವರ್ಷದ ಜನುಮದಿನದ ಅಮೃತಮಹೋತ್ಸವ ಎಂದು ಮಾಜಿ ಸಚಿವ ಹೆಚ್. ಎಂ. ರೇವಣ್ಣ ಹೇಳಿದರು.
ಈ ಕಾರ್ಯಕ್ರಮವು ಶಕ್ತಿ ಪ್ರದರ್ಶನ ಅಲ್ಲ, ಮುಖ್ಯಮಂತ್ರಿ ಅಂತಾ ಘೋಷಿಸುವುದಾಗಲೀ, ಇನ್ನೊಂದು ಆಗಲಿ ಇಲ್ಲ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಡಿ. ಕೆ. ಶಿವಕುಮಾರ್ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಮಟ್ಟದ ನಾಯಕರು ಭಾಗವಹಿಸುತ್ತಿದ್ದಾರೆ. ಇದೊಂದು ಅಭೂತಪೂರ್ವ ಕಾರ್ಯಕ್ರಮ ಆಗಲಿದೆ ಎಂದು ಹೇಳಿದರು.
ಪಕ್ಷದ ಮುಖಂಡರು, ಅಭಿಮಾನಿಗಳು, ಹಿತೈಷಿಗಳು ಹಾಗೂ ಕಾರ್ಯಕರ್ತರು ಸೇರಿ ಸಿದ್ದರಾಮಯ್ಯ ಜನುಮದಿನ ಆಚರಿಸುತ್ತಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯವೂ ಇಲ್ಲ. ಎಲ್ಲರೂ ಒಟ್ಟಾಗಿದ್ದೇವೆ. ಭ್ರಷ್ಟಾಚಾರ ರಹಿತ, ಕಳಂಕರಹಿತ ರಾಜಕಾರಣಿ ಎಂದರೆ ಸಿದ್ದರಾಮಯ್ಯ ಎಂದು ಬಣ್ಣಿಸಿದರು.
PublicNext
11/07/2022 08:22 pm