ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಡಿಕೆಶಿ ಸಿಟ್ಟಾದರೆ ನಾನೇನು ಮಾಡಲಿ, ಸಿದ್ದರಾಮಯ್ಯ ಸಿಎಂ ಆಗಲಿ; ಜಮೀರ್ ಅಹ್ಮದ್

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನನ್ನ ಮೇಲೆ ಸಿಟ್ಟಾದರೆ ಏನು ಮಾಡಲಾಗುತ್ತದೆ. ನನ್ನ ವೈಯಕ್ತಿಕ ಅಭಿಪ್ರಾಯ ಹೇಳಿದ್ದೇನೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮತ್ತೊಮ್ಮೆ ಸಿಎಂ ಆಗಬೇಕೆಂಬುದು ನನ್ನ ಅಪೇಕ್ಷೆ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.

ಹರಿಹರ ಪಟ್ಟಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಹಿಂದೆಯೂ ಸಿದ್ದರಾಮಯ್ಯ ಅವರು ಸಿಎಂ ಆಗಬೇಕೆಂದಿದ್ದೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನನ್ನ ಅಭಿಪ್ರಾಯ ವ್ಯಕ್ತಪಡಿಸಬಾರದಾ ಎಂದು ಪ್ರಶ್ನಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರಿಗೆ ಮಾತಿನಲ್ಲೇ ಟಾಂಗ್ ಕೊಟ್ಟ ಜಮೀರ್ ಅಹ್ಮದ್ ಮುಂದಿನ ಸಿಎಂ ಸಿದ್ದರಾಮಯ್ಯ ಅನ್ನೋ ಜಮೀರ್ ಹೇಳಿಕೆಗೆ ಡಿಕೆ ಶಿವಕುಮಾರ್ ಸಿಟ್ಟಾದರೆ ಯಾರೂ ಏನು ಮಾಡಲು ಆಗದು. ಅಧ್ಯಕ್ಷರು ಸಿಟ್ಟಾದ್ರೆ ನಾನೇನು ಮಾಡೋಕೆ ಆಗುತ್ತೆ ಎಂದು ಬಲವಾಗಿ ಪ್ರತಿಪಾದಿಸಿದರು.

ಡಿ. ಕೆ. ಶಿವಕುಮಾರ್ ನಮ್ಮ ಅಧ್ಯಕ್ಷರಿದ್ದಾರೆ. ಅವರು ದೊಡ್ಡವರಿದ್ದಾರೆ. ನನ್ನ ಅಭಿಪ್ರಾಯದಲ್ಲಿ ತಪ್ಪೇನಿಲ್ಲ. ನಮ್ಮ ಪಕ್ಷ ಹೈಕಮಾಂಡ್ ಹೊಂದಿದೆ. ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ ಅಂತಾನೇ ನಾನು ಹೇಳಿರೋದು. ಪಕ್ಷಕ್ಕೆ ಹಾಗೂ ಅಧ್ಯಕ್ಷರಿಗೆ ನಾವು ಗೌರವ ಕೊಟ್ಟೇ ಕೊಡುತ್ತೇವೆ ಎಂದು ತಿಳಿಸಿದರು.

Edited By :
PublicNext

PublicNext

23/07/2022 02:42 pm

Cinque Terre

48.27 K

Cinque Terre

2