ಸಿದ್ದರಾಮೋತ್ಸವ ಇದು ರಾಜಕೀಯ ಕಾರ್ಯಕ್ರಮವಲ್ಲ. ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯನವರ ಅಭಿಮಾನಿಗಳು ಈ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ. ಎಲ್ಲದರಲ್ಲಿಯೂ ರಾಜಕೀಯ ಮಾಡುವುದು ಸರಿಯಲ್ಲ. ಸಿದ್ದರಾಮಯ್ಯನವರು 75 ವರ್ಷಗಳನ್ನು ಪೂರೈಸಿದ್ದಾರೆ. 40 ವರ್ಷಗಳ ರಾಜಕಾರಣ ಮಾಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ಕಾರ್ಯಕ್ರಮ ಮಾಡಲಾಗುತ್ತಿದೆ. ಹಾಗಾಗಿ ಬೆಳಗಾವಿಯಿಂದ 50 ಸಾವಿರ ಜನ ಭಾಗಿಯಾಗಲಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಹೇಳಿದರು.
ಬೆಳಗಾವಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಪ್ರಯುಕ್ತ ಕೇಂದ್ರ ಸರಕಾರ ಕರೆ ನೀಡುವ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ರಾಜಕೀಯವಾಗಿ ನೋಡಲು ಬರುವುದಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳಾಗಿವೆ. ಸ್ವಾತಂತ್ರ್ಯ ಸಿಕ್ಕಾಗಿನಿಂದ ಆರ್‍ಎಸ್‍ಎಸ್ ಕಚೇರಿಯ ಮೇಲೆ ರಾಷ್ಟ್ರಧ್ವಜವೇ ಹಾರಾಡಿರಲಿಲ್ಲ. ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಆಚರಣೆಯನ್ನು ನಾವು ರಾಜಕೀಯವಾಗಿ ನೋಡಲು ಇಷ್ಟಪಡಲ್ಲ. ರಾಜಕೀಯೇತರವಾಗಿ ನಾನು ಇದನ್ನು ನೋಡಬಯಸುತ್ತೇನೆ ಎಂದರು.
ಒಬ್ಬ ಆದಿವಾಸಿ ಮಹಿಳೆ ದೇಶದ ಪ್ರಥಮ ಪ್ರಜೆಯಾಗಿ ಆಯ್ಕೆಯಾಗಿದ್ದಾರೆ. ಬಲಿಷ್ಠ ಪ್ರಜಾಪ್ರಭುತ್ವ ದೇಶದ ರಾಷ್ಟ್ರಪತಿಗಳಾಗಿ ಅವರು ಆಯ್ಕೆಯಾಗಿದ್ದಾರೆ. ನಾನು ಅವರನ್ನು ಮನಃಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದರು.
PublicNext
25/07/2022 04:53 pm