ಅನುಭವ ಮಂಟಪ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಯಾರೂ ಗೊಂದಲ ಸೃಷ್ಟಿಸುವುದು ಬೇಡ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು.
ಶಾಮನೂರು ಶಿವಶಂಕರಪ್ಪರ ಮೊಮ್ಮಗಳ ಮದುವೆಯಲ್ಲಿ ಪಾಲ್ಗೊಳ್ಳುವುದಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಉಸ್ತುವಾರಿ ಸಚಿವನಾಗಿದ್ದಾಗ ಗೋರೂರು ಚನ್ನಬಸಪ್ಪ ಅಧ್ಯಕ್ಷತೆಯಲ್ಲಿ ಸಮಿತಿ ಮಾಡಿದ್ದೆ. ಬಸವ ಕಲ್ಯಾಣ ಮಂಡಳಿ ಅಭಿವೃದ್ದಿ ಪ್ರಾಧಿಕಾರಕ್ಕೆ ಜಾಮದಾರ್ ಇದ್ರು. ಎಲ್ಲಾ ತಜ್ಞರು ಸಂಶೋಧನೆ ಮಾಡಿದ್ದಾರೆ. ಈ ಬಗ್ಗೆ ಮತ್ತೆ ಗೊಂದಲ ಸೃಷ್ಟಿ ಮಾಡೋದು ಬೇಡ ಎಂದರು.
12 ನೇ ಶತಮಾನದಲ್ಲಿ ಬಸವಣ್ಣ ಎಲ್ಲಿ ವಾಸ ಮಾಡುತ್ತಿದ್ದರು. ಎಲ್ಲಾ ಸಮುದಾಯವನ್ನ ಜೊತೆಗೆ ಕರೆದುಕೊಂಡು ಜ್ವಲಂತ ಸಮಸ್ಯೆ ಬಗೆಹರಿಸುತ್ತಿದ್ದರು. ಅದೇ ಅನುಭವ ಮಂಟಪ ಆಗಿತ್ತು. ಈಗ ವಿಶೇಷ ವಿವಾದ ಸೃಷ್ಟಿ ಮಾಡೋದು ಸರಿಯಲ್ಲ. ಅನುಭವ ಮಂಟಪ ಕಾಮಗಾರಿ ಶೀಘ್ರದಲ್ಲಿ ಆಗಬೇಕು ಎಂದು ಅಭಿಪ್ರಾಯಪಟ್ಟರು.
ಕಾಂಗ್ರೆಸ್ ರಾಜಭವನ ಚಲೋ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇಡಿ, ಸಿಬಿಐನ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ತನ್ನ ಕೈಗೊಂಬೆಯಾಗಿ ಮಾಡಿಕೊಂಡಿದ್ದಾರೆ. ಬಿಜೆಪಿ ಪ್ರೈವೆಟ್ ಆರ್ಮಿ ತರ ಆಗಿ ಉಪಯೋಗಿಸಿಕೊಳ್ಳುತ್ತಿದ್ದಾರೆ. ಇದು ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ. ಹಾಗಾಗಿ ನ್ಯಾಯ ಸಿಗುವರೆಗೂ ಹೋರಾಟ ಮಾಡುತ್ತೇವೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
PublicNext
16/06/2022 07:18 pm