ದಾವಣಗೆರೆ: ಕಾಂಗ್ರೆಸ್ ಮುಖಂಡರು ಪಕ್ಷ ಬಿಟ್ಟು ಬೇರೆ ಬೇರೆ ಪಕ್ಷಕ್ಕೆ ಹೋಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಜಿಎಂಐಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ದೇಶದಲ್ಲಿ ಧೂಳೀಪಟವಾಗಿದೆ. ಎಲ್ಲಿಯೂ ಭವಿಷ್ಯ ಇಲ್ಲ. ಕರ್ನಾಟಕದಲ್ಲಿ ಉಸಿರಾಡುತ್ತಿದೆ ಅಷ್ಟೇ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಕಾಂಗ್ರೆಸ್ ಮತ್ತಷ್ಟು ಹೀನಾಯ ಸ್ಥಿತಿ ತಲುಪಲಿದೆ ಎಂದು ತಿಳಿಸಿದರು.
ಅವಧಿಗೆ ಮುನ್ನ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದಿಲ್ಲ. ಅವಧಿ ಮುಗಿದ ಬಳಿಕವೇ ಎಲೆಕ್ಷನ್. ರಾಷ್ಟ್ರದ ವರಿಷ್ಠರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ. ಡಿಸೆಂಬರ್ ಗೆ ಚುನಾವಣೆಗೆ ಹೋಗುತ್ತೇವೆ ಎಂಬುದು ಸುಳ್ಳು. ಈಗ ಅಂಥ ವಾತಾವರಣ ಕಂಡು ಬರುತ್ತಿಲ್ಲ. ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಬಿಜೆಪಿ ಪಕ್ಷ ಬಲವರ್ಧನೆ ಸಂಬಂಧ ಸುದೀರ್ಘವಾಗಿ ಚರ್ಚೆ ನಡೆಸಲಾಗುತ್ತಿದೆ. ಮುಂದಿನ ವಾರದಿಂದ ಮತ್ತೆ ಪ್ರವಾಸ ಆರಂಭಿಸುತ್ತೇವೆ. ಯಾವಾಗ ಚುನಾವಣೆ ಬಂದರೂ ಎದುರಿಸಲು ಸಿದ್ಧರಿದ್ದೇವೆ. ಅವಧಿ ಪೂರ್ಣಗೊಂಡ ಬಳಿಕ ಚುನಾವಣೆ ನಡೆಯಲಿದೆ ಎಂದು ಹೇಳಿದರು.
PublicNext
20/04/2022 01:09 pm