ಪಕ್ಷ ನನ್ನನ್ನು ಗುರುತಿಸಿ ಸಚಿವ ಸ್ಥಾನ ನೀಡಿದ್ರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದ್ದಾರೆ.
ಚನ್ನಗಿರಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಮಾತು ಹೇಳುವ ಮೂಲಕ ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೊಂಡಿದ್ದಾರೆ.
ಸಿಎಂ ದೆಹಲಿಗೆ ಹೋಗುತ್ತಿದ್ದಂತೆ ಸಚಿವ ಸ್ಥಾನ ಆಸೆ ಬಿಚ್ಚಿಟ್ಟಿರುವ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರು, ಬಿಜೆಪಿ ಪಕ್ಷವು ನನ್ನನ್ನು ಶಾಸಕನಾಗಿ ಮಾಡಿದೆ. ಸಾಬೂನು ಮಾರ್ಜಕ ಮಂಡಳಿ ಅಧ್ಯಕ್ಷರನ್ನಾಗಿಸಿದೆ. ನಾನೊಬ್ಬ ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷಕ್ಕೆ, ಸಿಎಂಗೆ ಮುಜುಗರ ಆಗುವಂತ ಕೆಲಸ ಮಾಡಲ್ಲ. ಒಂದು ವೇಳೆ ಪಕ್ಷವು ಸಚಿವ ಸ್ಥಾನ ನೀಡಿದ್ರೆ ಉತ್ತಮ ಕೆಲಸ ಮಾಡುತ್ತೇನೆ ಎಂದು ಹೇಳಿದರು.
PublicNext
21/05/2022 06:39 pm