ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75 ನೇ ವರ್ಷದ ಅಮೃತ ಮಹೋತ್ಸವ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಯಾವುದೇ ಗೊಂದಲ ಇಲ್ಲ. ಸಿದ್ದರಾಮಯ್ಯ ಅವರನ್ನು ಕಷ್ಟಪಟ್ಟು ಒಪ್ಪಿಸಲಾಗಿದೆ. ಕಾಂಗ್ರೆಸ್ ನಲ್ಲಿ ವ್ಯಕ್ತಿ ಪೂಜೆಗೆ ಅವಕಾಶ ಇಲ್ಲ. ಪಕ್ಷ ಪೂಜೆಗೆ ಮಹತ್ವ ಇದೆ. ಡಿ. ಕೆ. ಶಿವಕುಮಾರ್ ಅವರು ಹೇಳಿದ್ದರಲ್ಲಿ ತಪ್ಪೇನಿಲ್ಲ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ರಾಜಕಾರಣ, ಸಿಎಂ ಆಗಿ ಮಾಡಿದ ಕೆಲಸಗಳು ಇಂದಿಗೂ ಜನರ ಮನಸ್ಸಿನಲ್ಲಿ ಹಾಗೇ ಉಳಿದಿವೆ. ಇಂಥ ಮಹಾನ್ ನಾಯಕನ ಜನ್ಮದಿನಾಚರಣೆ ಆಚರಿಸುತ್ತಿರುವುದು ಎಲ್ಲರಿಗೂ ಖುಷಿ ತಂದಿದೆ. ನಾನು ಮೈಸೂರಿನವಳೇ ಆಗಿದ್ದು, ಎಂದಿಗೂ ಸಿದ್ದರಾಮಯ್ಯ ಕೇಕ್ ಕತ್ತರಿಸಿಕೊಂಡು ಆಚರಿಸಿಲ್ಲ. ಶಿವಕುಮಾರ್ ಅವರೇ ಕಾರ್ಯಕ್ರಮಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದರು.
ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಅವರ ಜೊತೆ ಕೆಲಸ ಮಾಡುತ್ತಿದ್ದೇನೆ. ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೆ ನಾಡಿನೆಲ್ಲೆಡೆಯಿಂದ ಮಹಿಳೆಯರು ಬರುತ್ತಾರೆ. ಇದೊಂದು ಅಭೂತಪೂರ್ವ ಕಾರ್ಯಕ್ರಮ ಆಗಲಿದೆ ಎಂದರು.
PublicNext
19/07/2022 08:06 pm