ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: 'ಕಾಂಗ್ರೆಸ್‌ ಬೆಳವಣಿಗೆಗೆ ಪಕ್ಷದವರಿಂದಲೇ ಅಡ್ಡಗಾಲು'

ಅರಭಾವಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಸ್ವಪಕ್ಷದವರೇ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಅರಭಾವಿಯ ಕಾಂಗ್ರೆಸ್ ಪಕ್ಷದ ಮುಖಂಡ ಅರವಿಂದ್ ದಳವಾಯಿ ದೂರಿದ್ದಾರೆ.

ಬೆಳಗಾವಿಯಲ್ಲಿ ನಡೆದ ಸಿದ್ದರಾಮೋತ್ಸವದ ಪೂರ್ವಭಾವಿ ಸಭೆಯಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ್ ನಾವಲಗಟ್ಟಿ ಹಾಗೂ ಅರವಿಂದ್ ದಳವಾಯಿ ನಡುವೆ ಜಟಾಪಟಿ ನಡೆಯಿತು. ಬಳಿಕ ಸಭೆಯಿಂದ ಹೊರಬಂದು ಮಾತನಾಡಿದ ಅರವಿಂದ್ ದಳವಾಯಿ, "ನಾನು ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಆದರೆ ಕೆಲವರು ವೈಯಕ್ತಿಕ ಹಾಗೂ ಕೌಟುಂಬಿಕ ಹಿತಾಸಕ್ತಿ ಇಟ್ಟುಕೊಂಡು ಕಾಂಗ್ರೆಸ್ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುವ ಮೂಲಕ ಪಕ್ಷಕ್ಕೆ ಅನ್ಯಾಯವೆಸಗುತ್ತಿದ್ದಾರೆ. ಈ ಕುರಿತು ಈಗಾಗಲೇ ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ತರುತ್ತೇನೆ" ಎಂದು ಅಳಲು ತೋಡಿಕೊಂಡರು.

ವಿನಯ್ ನಾವಲಗಟ್ಟಿ ಅವರೊಂದಿಗಿನ ಜಟಾಪಟಿ ಕುರಿತು ಖಾರವಾಗಿ ಪ್ರತಿಕ್ರಿಯಿಸಿದ ಅವರು, ಜಿಲ್ಲಾಧ್ಯಕ್ಷರು ತಮ್ಮ ಹಳೇ ಚಾಳಿಯನ್ನು ಮುಂದುವರಿಸಿದ್ದಾರೆ. ಈ ಎಲ್ಲದರ ಕುರಿತು ಮಾಹಿತಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರಿಗೆ ನೀಡುವೆ ಎಂದರು.

ವರದಿ: ಸಂತೋಷ ಬಡಕಂಬಿ

Edited By :
PublicNext

PublicNext

25/07/2022 06:00 pm

Cinque Terre

35.64 K

Cinque Terre

0

ಸಂಬಂಧಿತ ಸುದ್ದಿ