ಕನಕಪುರ : ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕಾದ ಪತ್ರಿಕೋದ್ಯಮ ಇಂದು ಕವಲುದಾರಿಯಲ್ಲಿದೆ ಎಂದು ವಿಧಾನಪರಿಷತ್ ಸದಸ್ಯ ಎಸ್.ರವಿ ಹೇಳಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಕನಕಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಲಾಗಿದ್ದ, ಪತ್ರಿಕಾ ದಿನಾಚರಣೆ ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳು ಇಂದು ವ್ಯಾಪಾರಿ ಮನೋಭಾವವನ್ನು ಬೆಳೆಸಿಕೊಳ್ಳುತ್ತಿದ್ದು ಇದು ಬೇಸರದ ಸಂಗತಿ ಎಂದರು.
ಸಂವಿಧಾನದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗ ಸಮಾಜದ ಒಳಿತಿಗಾಗಿ ಶಾಂತಿ ನೆಮ್ಮದಿಗಾಗಿ ಸುದ್ದಿಗಳನ್ನು ಮಾಡಬೇಕಿದೆ ಎಂದು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ ಇಂದು ಮುದ್ರಣ ಮಾಧ್ಯಮ ಸಂಕಷ್ಟದಲ್ಲಿದ್ದರು ಸಹ ಜನರ ಮನಸ್ಸನ್ನು ಗೆಲ್ಲುವಲ್ಲಿ ಸಫಲವಾಗಿದ್ದು ಯುವಕರು ಪತ್ರಿಕೋದ್ಯಮದ ಕಡೆ ಬಂದು ಸರ್ಕಾರದ ವಿಫಲತೆಯನ್ನು ಜನರಿಗೆ ತೋರಿಸಬೇಕು ಎಂದು ಕರೆ ನೀಡಿದರು.
PublicNext
23/08/2022 08:31 pm