ಬೆಂಗಳೂರು : ಶಿರಾ ಮತ್ತು ಆರ್ ಆರ್ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾವೇರುತ್ತಿದೆ.
ಈ ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರ್.ಆರ್. ನಗರ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಮತ್ತು ಟಿಕೆಟ್ ಆಕಾಂಕ್ಷಿಗಳ ಜೊತೆ ಸಭೆ ನಡೆಸಿ, ಮಾಹಿತಿ ಪಡೆಯಲಾಗಿದೆ.
ಶೀಘ್ರದಲ್ಲೇ ಜೆಡಿಎಸ್ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗುವುದು.
ರಾಷ್ಟ್ರೀಯ ಪಕ್ಷಗಳನ್ನು ಮಣಿಸುವುದೇ ನಮ್ಮ ಗುರಿ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಕಾಂಗ್ರೆಸ್ ನಾಯಕರು ಈಗಾಗಲೇ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ನಾನು ಗಮನಿಸಿದ್ದೇನೆ. ನಮ್ಮ ಪಕ್ಷದಿಂದ ಏಕಾಂಗಿ ಸ್ಪರ್ಧೆ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.
PublicNext
01/10/2020 02:19 pm