ನವದೆಹಲಿ: ಕೇಂದ್ರದ ಮಾಜಿ ಗೃಹ ಸಚಿವ ಬುಟಾ ಸಿಂಗ್ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.
ಜಲೋರ್- ಸಿರೋಹಿ ಕ್ಷೇತ್ರದ ಸಂಸದರಾಗಿದ್ದ ಬುಟಾ ಸಿಂಗ್ ಅವರು ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದರು. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇಂದಿರಾ ಗಾಂಧಿ ಸಂಪುಟದಲ್ಲಿ ಗೃಹ ಸಚಿವರಾಗಿ ನಂತರ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.
PublicNext
02/01/2021 11:28 am