ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರಕ್ಕೆ ವಿದೇಶಾಂಗ ನೀತಿ ಪಾಠ ಮಾಡಿದ್ದಾರೆ.
ಈ ಹಿಂದೆ ಅವರು ಕೇಂದ್ರ ಸರ್ಕಾರಕ್ಕೆ ಆರ್ಥಿಕ ವಿಚಾರ ಹಾಗೂ ಕೊರೋನಾ ವೈರಸ್ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಟೀಕಿಸಿ, ನೀತಿ ಪಾಠ ಮಾಡಿದ್ದರು. ಆದರೆ ಈಗ ವಿದೇಶಾಂಗ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಡೆಯನ್ನು ಟೀಕಿಸಿದ್ದಾರೆ.
ಬಾಂಗ್ಲಾದೇಶದೊಂದಿಗೆ ಭಾರತದ ಸಂಬಂಧ ಬಿಗಡಾಯಿಸಿದೆ. ಇನ್ನೊಂದು ಕಡೆ ಬಾಂಗ್ಲಾದೇಶ ಚೀನಾದೊಂದಿಗೆ ಸಂಬಂಧ ಗಟ್ಟಿಗೊಳಿಸಿಕೊಳ್ಳುತ್ತಿದೆ ಎಂಬ
ಮಾಧ್ಯಮವೊಂದರ ಸುದ್ದಿಯ ಸ್ಕ್ರೀನ್ ಶಾರ್ಟ್ ಅನ್ನು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಜೊತೆಗೆ, "ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷ ಭಾರತದೊಂದಿಗೆ ಬೆಸೆದಿದ್ದ ನೆರೆ–ಹೊರೆಯ ರಾಷ್ಟ್ರಗಳ ಬಾಂಧವ್ಯ ಮತ್ತು ಸಂಬಂಧಗಳನ್ನು ಪ್ರಧಾನಿ ನರೇಂದ್ರ ಮೋದಿ ಹಾಳು ಮಾಡಿದ್ದಾರೆ ಎಂದು ದೂರಿದ್ದಾರೆ.
PublicNext
23/09/2020 05:47 pm