ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆದ್ದಾರಿ ಬ್ಲಾಕ್, ಒಳದಾರಿಯಿಂದ ಹತ್ರಾಸ್ ಸಂತ್ರಸ್ಥೆಯ ಕುಟುಂಬದವರ ಭೇಟಿಗೆ ರಾಹುಲ್ ಗಾಂಧಿ ಎರಡನೇ ಪ್ರಯತ್ನ

ಬೆಂಗಳೂರು: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿರುವ ಅಪ್ರಾಪ್ತ ಯುವತಿ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದ ನಿಯೋಗ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇವತ್ತು ಯುವತಿ ಕುಟುಂಬದವರನ್ನು ಭೇಟಿಯಾಗಲು ಎರಡನೇ ಪ್ರಯತ್ನ ನಡೆಸಿದ್ದಾರೆ.

ಸಂತ್ರಸ್ತೆಯ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು ಉತ್ತರ ಪ್ರದೇಶದ ಹತ್ರಾಸ್‍ಗೆ ತೆರಳುವಾಗ ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಪೊಲೀಸರು ತಡೆಯುವುದನ್ನು ತಪ್ಪಿಸಿಕೊಳ್ಳಲು ಒಳದಾರಿಯಿಂದ ಅವರು ತೆರಳಲಿದ್ದಾರೆ.

ಯುವತಿ ಕುಟುಂಬದವರ ಭೇಟಿಗೆ ತೆರಳುತ್ತಿದ್ದ ರಾಹುಲ್ ಗಾಂಧಿ ಅವರಿಗೆ ಪೊಲೀಸರು ಅವಕಾಶ ನೀಡಿರಲಿಲ್ಲ, ಹೀಗಾಗಿ ಮತ್ತೊಮ್ಮೆ ಪಕ್ಷದ ಸಂಸದರೊಂದಿಗೆ ರಾಹುಲ್ ಗಾಂಧಿ ಇಂದು ಮಧ್ಯಾಹ್ನ ಹತ್ರಾಸ್ ಗೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಕೆ. ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

ಈ ಹಿನ್ನಲೆ ಹತ್ರಾಸ್ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಗ್ರಾಮವನ್ನು ಬ್ಲಾಕ್ ಮಾಡಿರುವ ಪೊಲೀಸರು, ಮಾಧ್ಯಮಗಳಿಗೂ ಅವಕಾಶ ನೀಡುತ್ತಿಲ್ಲ. ಆದರೂ, ಖಾಸಗಿ ಚಾನೆಲ್ ವೊಂದು ಸಂತ್ರಸ್ಥೆಯ ಕುಟುಂಬ ಸದಸ್ಯರೊಬ್ಬರನ್ನು ಭೇಟಿ ಮಾಡಿದ್ದು, ತಮ್ಮನ್ನು ಮಾಧ್ಯಮದವರ ಜೊತೆ ಮಾತನಾಡಲು ಬಿಡುತ್ತಿಲ್ಲ, ಇಡೀ ಗ್ರಾಮವನ್ನು ಸ್ಥಳೀಯ ಪೊಲೀಸರು ಸುತ್ತುವರೆದಿದ್ದು ಮನೆಯಿಂದ ಹೊರಗೆ ಬಿಡುತ್ತಿಲ್ಲ ಎಂದು ಪೊಲೀಸರ ವಿರುದ್ಧ ಯುವತಿ ಕುಟುಂಬದವರು ಆರೋಪಿಸಿದ್ದಾರೆ, ಮಾಧ್ಯಮ ಪ್ರತಿನಿಧಿಗಳಿಗೆ ಗ್ರಾಮಕ್ಕೆ ಪ್ರವೇಶಿಸಲು ನಿರಾಕರಿಸಲಾಗುತ್ತಿದೆ ಎಂದು ದೂರಿದ್ದಾರೆ.

Edited By :
PublicNext

PublicNext

03/10/2020 10:33 am

Cinque Terre

79.88 K

Cinque Terre

4

ಸಂಬಂಧಿತ ಸುದ್ದಿ