ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯುಪಿಯಲ್ಲಿ ರಾಹುಲ್, ಪ್ರಿಯಾಂಕಾ ಗಾಂಧಿಯೇ ಸುರಕ್ಷಿತರಲ್ಲ- ಸಿದ್ದರಾಮಯ್ಯ ಆತಂಕ

ಬೆಂಗಳೂರು: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರೇ ಸುರಕ್ಷಿತರಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದ ಹತ್ರಾಸ್​ ಸಾಮೂಹಿಕ ಅತ್ಯಾಚಾರ​ ಖಂಡಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಇಂದು ಹತ್ರಾಸ್​ಗೆ ತೆರಳಿ ಮೃತ ಯುವತಿಯ ಕುಟುಂಬಸ್ಥರನ್ನು ಭೇಟಿಯಾಗಲು ಮುಂದಾಗಿದ್ದರು. ಆದರೆ ನೊಯ್ಡಾದಲ್ಲೇ ಅವರಿಬ್ಬರ ವಾಹನಗಳನ್ನೂ ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ. ಈ ವಿಚಾರವಾಗಿ ಸರಣಿ ಟ್ವೀ ಮಾಡಿರುವ ಸಿದ್ದರಾಮಯ್ಯ ಅವರು ಉತ್ತರ ಪ್ರದೇಶದ ಸರ್ಕಾರ ಮತ್ತು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

'ಉತ್ತರ ಪ್ರದೇಶದ ಪೊಲೀಸರು ನಮ್ಮ ಪಕ್ಷದ ನಾಯಕಾರ ರಾಹುಲ್​ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದು ಖಂಡನೀಯ. ಇವರಿಬ್ಬರನ್ನೂ ಬಂಧಿಸಿರುವುದಕ್ಕೆ ಮತ್ತು ಪೊಲೀಸರ ದುರ್ವರ್ತನೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಖಂಡಿತ ಬೆಲೆ ತೆರಬೇಕಾಗುತ್ತದೆ' ಎಂದಿದ್ದಾರೆ.

ಉತ್ತರ ಪ್ರದೇಶದ ಪೊಲೀಸ್​ ರಾಜ್ಯದಲ್ಲಿ ಸಂಸದ ರಾಹುಲ್​ ಗಾಂಧಿ, ನಮ್ಮ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿಯವರೇ ಸುರಕ್ಷಿತರಲ್ಲ ಎಂದಮೇಲೆ ಅಲ್ಲಿನ‌ ದಲಿತರು,‌ ಮಹಿಳೆಯರು, ರೈತರು, ಕಾರ್ಮಿಕರು ಹೇಗೆ ಸುರಕ್ಷಿತರಾಗಿರಲು ಸಾಧ್ಯ?. ಯೋಗಿ ಸರ್ಕಾರ ಪ್ರಜಾಪ್ರಭುತ್ವಕ್ಕೇ ಕಳಂಕ. ಅತ್ಯಾಚಾರಕ್ಕೀಡಾಗಿ, ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಪೊಲೀಸರು ಗೃಹಬಂಧನದಲ್ಲಿ ಇರಿಸಿದ್ದಾರೆ. ಸರ್ಕಾರದ ಬಣ್ಣ ಬಯಲಾಗುತ್ತದೆ ಎನ್ನುವ ಕಾರಣಕ್ಕೆ ಆ ಕುಟುಂಬದ ಭೇಟಿಗೆ ನಮ್ಮ ನಾಯಕರಾದ ರಾಹುಲ್​ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರಿಗೆ ಭೇಟಿಗೆ ಅವಕಾಶ ಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

Edited By : Vijay Kumar
PublicNext

PublicNext

01/10/2020 07:11 pm

Cinque Terre

81.95 K

Cinque Terre

10

ಸಂಬಂಧಿತ ಸುದ್ದಿ