ಬೆಂಗಳೂರು: ಒಂದೆಡೆ ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ನೀಡಬೇಕೆಂಬ ಹೋರಾಟ ನಡೆಯುತ್ತಿದೆ. ಅದರ ನಡುವೆ ಈಗ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳನ್ನ ಒಬಿಸಿಗೆ ಸೇರಿಸಬೇಕು ಅನ್ನೋ ಕೂಗು ಎದ್ದಿದೆ. ಅಷ್ಟೇ ಅಲ್ಲ ಕೇಂದ್ರಕ್ಕೆ ಈ ಬಗ್ಗೆ ಶಿಫಾರಸ್ಸು ಮಾಡ್ಬೇಕು ಅಂತಾ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ದೊಡ್ಡ ದೊಡ್ಡ ಶ್ರೀಗಳೇ ಅಖಾಡಕ್ಕಿಳಿಯುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ವಿಜಯನಗರದ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ವೀರಶೈವ-ಲಿಂಗಾಯತ ಮಠಾಧೀಶರ ಒಕ್ಕೂಟದ ಸಭೆ ನಡೆಯಲಿದೆ. ವೀರಶೈವ ಲಿಂಗಾಯತ ಮಠಾಧೀಶರ ಒಕ್ಕೂಟದ ಸಭೆಯಲ್ಲಿ 500ಕ್ಕೂ ಹೆಚ್ಚು ಶ್ರೀಗಳು ಭಾಗಿಯಾಗಲಿದ್ದಾರೆ. ಉಜ್ಜಯಿನಿ ಜಗದ್ಗುರು, ಶ್ರೀಶೈಲ ಜಗದ್ಗುರುಗಳು ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಸಭೆ ನಡೆಸಿ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳನ್ನ ಕೇಂದ್ರದಲ್ಲಿ ಒಬಿಸಿಗೆ ಸೇರಿಸಲು ರಾಜ್ಯ ಸರ್ಕಾರ, ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಮನವಿ ಮಾಡುವ ಉದ್ದೇಶ ಹೊಂದಿದ್ದಾರೆ.
PublicNext
13/02/2021 09:18 am