ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಇಂದು 10 ಲಕ್ಷ ರೂ. ದೇಣಿಗೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ರಾಮಮಂದಿರಕ್ಕಾಗಿ ದೇಣಿಗೆ ನೀಡುವ ಮೂಲಕ ಗುರುವಂದನೆ ಸಲ್ಲಿಸಿದ್ದೇನೆ. ರಾಮ ಹುಟ್ಟಿದ ಜಾಗದಲ್ಲೇ ಶ್ರೀರಾಮ ದೇಗುಲ ನಿರ್ಮಾಣವಾಗುತ್ತಿದೆ. ಈ ಹಿಂದೆ ಆಗಿದ್ದ ತಪ್ಪನ್ನು ಸರಿಪಡಿಸಲು 500 ವರ್ಷಗಳೇ ಬೇಕಾದವು ಎಂದು ಹೇಳಿದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಉತ್ತರ ಪ್ರಾಂತ ಸಹ ಸಂಘ ಚಾಲಕ ಅರವಿಂದ ದೇಶಪಾಂಡೆ ಜಿ, ತಾಲೂಕು ಕಾರ್ಯವಾಹಕರಾದ ಸಂಜಯ್ ನಾಯಕ್ ಅವರಿಗೆ ಇಂದು ಸಚಿವರು ದೇಣಿಗೆಯ ಚೆಕ್ ನೀಡಿದ್ದಾರೆ. ಈ ವೇಳೆ ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
PublicNext
14/02/2021 08:34 pm