ತುಮಕೂರು: ರಾಜ್ಯದ ಸಿಎಂ ಆಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿಗೆ ಸಿದ್ಧಗಂಗಾ ಶ್ರೀಗಳು ಅಭಿನಂದನೆ ಸಲ್ಲಿಸಿದ್ದಾರೆ.
ರಾಜಕೀಯ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಅವರು ಇಂದು ನಮ್ಮ ರಾಜ್ಯದ 30ನೇ ಸಿಎಂ ಆಗಿ ಪದಗ್ರಹಣ ಮಾಡಿರೋದು ಸಂತಸದ ವಿಚಾರ. ಅವರ ನೇತೃತ್ವದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಯನ್ನು ನಾವು ನಿರೀಕ್ಷೆ ಮಾಡುತ್ತೇವೆ ಎಂದು ಸ್ವಾಮೀಜಿ ಹೇಳಿದರು.
PublicNext
28/07/2021 08:21 pm