ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂತ್ರಾಲಯ ರಾಯರ ದರ್ಶನ ಪಡೆದ ಕೇಂದ್ರ ಸಚಿವ ಭಗವಂತ ಖೂಬಾ

ರಾಯಚೂರು: ಬಿಜೆಪಿ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಂಡಿರುವ ಕೇಂದ್ರ ಸಚಿವ ಭಗವಂತ ಖೂಬಾ ಮಂತ್ರಾಲಯಕ್ಕೆ ಬಂದು ಗುರು ರಾಘವೇಂದ್ರ ರಾಯರ ದರ್ಶನ ಪಡೆದಿದ್ದಾರೆ.

ರಾಯರ ವೃಂದಾವನಕ್ಕೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಂದ ಆಶೀರ್ವಾದ ಪಡೆದರು. ನಿನ್ನೆ ತಡರಾತ್ರಿವರೆಗೂ ರಾಯಚೂರಲ್ಲಿ ಜನಾಶೀರ್ವಾದ ಯಾತ್ರೆ ಹಾಗೂ ಕಾರ್ಯಕರ್ತರ ಸಭೆ ನಡೆಸಿದ್ದ ಸಚಿವ ಖೂಬಾ, ಬೆಳಗ್ಗೆ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದಿದ್ದಾರೆ. ಇಂದು ಬಳ್ಳಾರಿ ಹಾಗೂ ಕೊಪ್ಪಳದಲ್ಲಿಯೂ ಜನಾಶೀರ್ವಾದ ಯಾತ್ರೆ ನಡೆಯಲಿದೆ.

Edited By : Nagaraj Tulugeri
PublicNext

PublicNext

19/08/2021 01:12 pm

Cinque Terre

42.2 K

Cinque Terre

0