ಬೆಂಗಳೂರು: ರಾಜ್ಯದ ಎಲ್ಲ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಗಣೇಶ ಹಬ್ಬ ಆಚರಿಸಲು ಉತ್ಸುಕವಾಗಿವೆ. ಆದ್ರೆ ಇನ್ನೂ ಕೂಡ ಸರ್ಕಾರದಿಂದ ಅನುಮತಿ ದೊರೆತಿಲ್ಲ. ಹಬ್ಬಕ್ಕೆ ಇನ್ನು ನಾಲ್ಕು ದಿನ ಮಾತ್ರ ಬಾಕಿ ಉಳಿದಿದೆ. ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕೆಂಬ ಒತ್ತಾಯವೂ ವ್ಯಾಪಕವಾಗಿ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇಂದು ಮಧ್ಯಾಹ್ನ 12.30ಕ್ಕೆ ನಡೆಯಲಿರುವ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಲಿದ್ದು, ಬಳಿಕ ಸಿಎಂ ಬೊಮ್ಮಾಯಿ ಘೋಷಣೆ ಮಾಡುವ ಸಾಧ್ಯತೆ ಇದೆ.
ಕಳೆದ ಬಾರಿಯ ಸಭೆಯಲ್ಲೇ ಆದೇಶ ಹೊರಡುತ್ತೆ ಎನ್ನಲಾಗಿತ್ತು. ಆದರೆ ಸಿಎಂ ಮಾತ್ರ ಡಿಸಿಗಳಿಂದ ಮಾಹಿತಿ ಪಡೆದು ಸರಿಯಾದ ಸಮಯಕ್ಕೆ ಸರಿಯಾದ ನಿರ್ಣ ತೆಗೆದುಕೊಳ್ಳುತ್ತೇವೆ ಎಂದಷ್ಟೇ ಹೇಳಿದ್ದರು. ಸಚಿವರು, ಹಿಂದೂಪರ ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ಹೇರಿವೆ. ಸಚಿವರ ಪ್ರಸ್ತಾಪಕ್ಕೆ ಸಕಾರಾತ್ಮಕವಾಗಿ ಸಿಎಂ ಸ್ಪಂದಿಸಿದ್ದಾರೆ ಅಂತ ತಿಳಿದು ಬಂದಿದೆ.
PublicNext
05/09/2021 08:59 am