ಮೈಸೂರು: ಸಾರ್ವಜನಿಕರಿಗೆ ದೇವಸ್ಥಾನಗಳ ಮೇಲೆ ಭಾವನಾತ್ಮಕ ಸಂಬಂಧವಿದ್ದು, ಸಮಾಲೋಚನೆ ನಡೆಸದೆ ಏಕಾಏಕಿ ತೆರವುಗೊಳಿಸಿದ್ದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಯಡಿಯೂರಪ್ಪ ಅವರು ಶನಿವಾರ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿಗೆ ಆಗಮಿಸಿದ್ದ ನಂಜನಗೂಡು ತಹಸೀಲ್ದಾರ್ ಮೋಹನಕುಮಾರಿ ಅವರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ನಂಜನಗೂಡು ತಾಲೂಕು ಹುಚ್ಚಗಣಿ ಗ್ರಾಮದ ಮಹದೇವಮ್ಮ ದೇವಸ್ಥಾನ ನೆಲಸಮಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಯಾವುದೇ ಕಾರಣಕ್ಕೂ ದೇವಾಲಯ ತೆರವು ಮಾಡುವುದು ಸರಿಯಲ್ಲ. ಈಗಾಗಲೇ ಮುಖ್ಯಮಂತ್ರಿಗಳು ತೆರವು ಮಾಡದಂತೆ ಸೂಚನೆ ನೀಡಿದ್ದಾರೆ. ದೇವಾಲಯ ಧ್ವಂಸ ಮಾಡದಂತೆ ನಾನೂ ಸಹ ಆಗ್ರಹ ಮಾಡುತ್ತೇನೆ. ಅದಕ್ಕೆ ಅವಕಾಶ ನೀಡುವುದಿಲ್ಲ ಎಂದರು.
PublicNext
18/09/2021 01:23 pm