ಕೊಪ್ಪಳ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಒದಗಿಸಬೇಕು ಎಂದು ಒತ್ತಾಯಿಸಿ ಅಕ್ಟೋಬರ್ 1ರಿಂದ ಬೆಂಗಲೂರಿನಲ್ಲಿ ಪುನಃ ಧರಣಿ ಸತ್ಯಾಗ್ರಹವನ್ನು ಆರಂಭಿಸಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜ್ಯ ಸ್ವಾಮೀಜಿ ಹೇಳಿದ್ದಾರೆ.
ಅವರು ನಗರದ ಪಂಚಮಸಾಲಿ ಸಮುದಾಯಭವನದಲ್ಲಿ ಪ್ರತಿಜ್ಞಾ ಪಂಚಾಯತ್ ಬೃಹತ್ ರಾಜ್ಯ ಅಭಿಯಾನ ಸಮಾವೇಶ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸತ್ಯಾಗ್ರಹ ಆರಂಭಕ್ಕೆ ಪಂಚಮಸಾಲಿ ಸಮುದಾಯ ತೀರ್ಮಾನಿಸಿದೆ. ಅದರ ಒಳಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೀಸಲಾತಿ ಘೋಷಿಸಿದರೆ ಸನ್ಮಾನ, ಇಲ್ಲವಾದರೆ ಬೆಂಗಳೂರಿನ ಸ್ವತಂತ್ರ ಉದ್ಯಾವನದಲ್ಲಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
PublicNext
20/09/2021 09:59 am