ಬೆಂಗಳೂರು: ಉತ್ತರಾಖಂಡ್ ರಾಜ್ಯದ ಕೇದಾರನಾಥದಲ್ಲಿ ಅದ್ವೈತ ತತ್ವ ಪ್ರತಿಪಾದಕ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವನ್ನು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅಭಿನಂದಿಸಿದ್ದಾರೆ.
ಈ ಬಗ್ಗೆ ಪ್ರಧಾನಿಗೆ ಪತ್ರ ಬರೆದಿರುವ ಅವರು, ಕರ್ನಾಟಕದ ಶೃಂಗೇರಿ ಶಾರದಾ ಪೀಠದ ಮಹಾನ್ ಸಂತ ಶಂಕರಾಚಾರ್ಯರ ಪ್ರತಿಮೆ ಕೇದಾರನಾಥದಲ್ಲಿ ಪ್ರತಿಷ್ಟಾಪಿಸಿರುವುದು ಸಂತೋಷದ ವಿಚಾರ ಎಂದಿದ್ದಾರೆ. ಪ್ರತಿಮೆ ಅನಾವರಣಗೊಳಿಸಿದ್ದಕ್ಕಾಗಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ. ಈ ಪ್ರತಿಮೆ ವೀಕ್ಷಿಸಲು ನಾನು ಕೂಡ ಉತ್ಸುಕನಾಗಿದ್ದೇನೆ. ಶೀಘ್ರದಲ್ಲೇ ಕೇದಾರನಾಥಕ್ಕೆ ತೆರಳಿ ಪ್ರತಿಮೆ ನೋಡುವ ಹಂಬಲ ನನ್ನೊಳಗಿದೆ ಎಂದು ದೇವೇಗೌಡ ಪತ್ರದಲ್ಲಿ ತಿಳಿಸಿದ್ದಾರೆ.
PublicNext
07/11/2021 07:45 am