ವಾರಣಾಸಿ: 800 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಾಶಿ ವಿಶ್ವನಾಥ ದೇವಾಲಯ ಆವರಣದ ಕಾರಿಡಾರ್‌ಅನ್ನು ಇಂದು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಹಾಗೂ 2000ಕ್ಕೂ ಹೆಚ್ಚು ಸಂತರು ಪಾಲ್ಗೊಳ್ಳಲಿದ್ದಾರೆ.
800 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಶಿ ವಿಶ್ವನಾಥ ಧಾಮ ಯೋಜನೆ ಪೂರ್ಣಗೊಂಡಿದೆ. ಈ ಕಾರಿಡಾರ್ ಯೋಜನೆ ಭಕ್ತಾದಿಗಳ ಪ್ರಯಾಣದ ಅವಧಿಯನ್ನು ಕಡಿಮೆ ಮಾಡುತ್ತದೆ ಹಾಗೂ ದೇವಾಲಯ ಮತ್ತು ಗಂಗಾ ನದಿಯ ನಡುವೆ ನೇರ ಸಂಪರ್ಕ ಸ್ಥಾಪಿಸುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ 2 ದಿನಗಳ ಕಾಲ ವಾರಾಣಸಿಯಲ್ಲಿಯೇ ಇರಲಿದ್ದು, ನಾಳೆ ಮತ್ತು ನಾಡಿದ್ದು ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಈ ಕಾರ್ಯಕ್ರಮವನ್ನು ಸ್ಮರಣೀಯವಾಗಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
PublicNext
13/12/2021 07:47 am