ಬೆಂಗಳೂರು: ಕರ್ನಾಟಕ ವಿಧಾನ ಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಯಾಗಿದೆ. ಇದರ ಬಗ್ಗೆ ಸದನದಲ್ಲಿ ಪರ-ವಿರೋಧದ ಚರ್ಚೆಯಾಗುತ್ತಿದೆ.
ಇದೇ ಹೊತ್ತಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಧರ್ಮದ ಬಗ್ಗೆ ಪ್ರಶ್ನೆ ಮಾಡಿದ ಬಿಜೆಪಿ ಟ್ವೀಟ್ ಮಾಡಿದೆ. ನಿಮ್ಮ ತಾತ ಒಬ್ಬ ಪಾರ್ಸಿ ಧರ್ಮೀಯ. ನಿಮ್ಮ ತಾಯಿ ಕ್ರೈಸ್ತ ಧರ್ಮೀಯರು. ಹಾಗಿದ್ದ ಮೇಲೆ ನೀವು ಹೇಗೆ ಹಿಂದೂ ಆಗುತ್ತೀರಿ? ರಾಹುಲ್ ಗಾಂಧಿ ಅವರೇ ಉತ್ತರಿಸಿ ಎಂದು ಪ್ರಶ್ನಿಸಿದ ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.
PublicNext
23/12/2021 04:16 pm