ಬೆಂಗಳೂರು: ಬರುವ ಯುಗಾದಿ ಒಳಗಾಗಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುತ್ತದೆ ಎಂಬ ನಿರೀಕ್ಷೆ ಇದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಹಿಂದುಳಿದ ವರ್ಗಗಳ ಆಯೋಗದ ವಿಚಾರಣೆಯಲ್ಲಿ ಹಾಜರಾಗಿ ಗೌಡ ಲಿಂಗಾಯತ ಸಮುದಾಯದ ಬಗ್ಗೆ ಶ್ರೀಗಳು ವಿವರಣೆ ನೀಡಿದ್ದಾರೆ.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಿಂಗಾಯತ ಪಂಚಮಸಾಲಿ ಸಮಾಜ, ಗೌಡ, ಲಿಂಗಾಯತ ಸಮಾಜವನ್ನು 2ಎಗೆ ಸೇರ್ಪಡೆ ಮಾಡಬೇಕೆಂದು ಹೋರಾಟ ನಡೆಯುತ್ತಿದೆ. ಪಂಚಮಸಾಲಿಗಳೆಂದರೆ, ಉತ್ತರ ಕರ್ನಾಟಕ ಮಾತ್ರ ಅಲ್ಲ, ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಯಲ್ಲಿ ಗೌಡ ಲಿಂಗಾಯತ ಹೆಸರಿನಲ್ದಿದ್ದಾರೆ. ಅವರೆಲ್ಲ ಕೃಷಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಇಂದು ಹಿಂದುಳಿದ ವರ್ಗಗಳ ಆಯೋಗ ಗೌಡ ಲಿಂಗಾಯತದ ಬಗ್ಗೆ ವಿವರಣೆ ಕೇಳಲು ಕರೆದಿದ್ದರು. ನಾವು ನಮ್ಮ ವಕೀಲರ ಜೊತೆ ಬಂದು ಅಭಿಪ್ರಾಯ ತಿಳಿಸಿದ್ದೇವೆ ಎಂದಿದ್ದಾರೆ.
PublicNext
28/12/2021 09:13 pm