ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜಸ್ಥಾನಕ್ಕೂ ಕಾಲಿಟ್ಟ ಹಿಜಾಬ್ ವಿವಾದ: ವಿದ್ಯಾರ್ಥಿಗಳ ನಡುವೆ ವಾಗ್ವಾದ

ಜೈಪುರ: ರಾಜಸ್ಥಾನದ ಜೈಪುರ ನಗರದ ಕಸ್ತೂರಿದೇವಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಭುಗಿಲೆದಿದ್ದಿದೆ. ಹಿಜಾಬ್ ಧರಿಸಿ ಬಂದವರಿಗೆ ಕಾಲೇಜಿನಲ್ಲಿ ಪ್ರವೇಶ ಇಲ್ಲ ಎಂದು ಆಡಳಿತ ಮಂಡಳಿ ಆದೇಶ ನೀಡಿದೆ. ಹೀಗಾಗಿ ಇಷ್ಟು ದಿನ ಇಲ್ಲದಿರುವ ಸಮಸ್ಯೆ ಈಗ ಯಾಕೆ ಬಂತು ಎಂಬುದು ಕಾಲೇಜಿನ ವಿದ್ಯಾರ್ಥಿನಿಯರು ಪ್ರಶ್ನೆ ಮಾಡಿದ್ದಾರೆ.

ಬುರ್ಖಾ ಹಾಗೂ ಹಿಜಾಬ್ ಧರಿಸಿದ ಕೆಲ ವಿದ್ಯಾರ್ಥಿನಿಯರು ಕಾಲೇಜಿಗೆ ಬರ್ತಾ ಇದ್ದಂತೆ ಆಡಳಿತ ಮಂಡಳಿ ಅವರನ್ನು ತಡೆದಿದೆ. ಈ ವೇಳೆ ವಿದ್ಯಾರ್ಥಿನಿಯರು ಕೆಲಕಾಲ ಆಡಳಿತ ಮಂಡಳಿಯೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ.

ನಂತರ ಹಿಜಾಬ್ ಧರಿಸಿದ್ದ ವಿದ್ಯಾರ್ಥಿ‌ನಿಯರು ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಅಲ್ಲಿ ಬಂದ ವಿದ್ಯಾರ್ಥಿನಿಯರ ಪೋಷಕರು ಕೂಡ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ನಂತರ ಸ್ಥಳಕ್ಕೆ ಬಂದ ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ಚದುರಿಸಿದ್ದಾರೆ.

Edited By : Nagaraj Tulugeri
PublicNext

PublicNext

12/02/2022 05:10 pm

Cinque Terre

98.43 K

Cinque Terre

16

ಸಂಬಂಧಿತ ಸುದ್ದಿ