ಪಾಟ್ನಾ: ನಾವು ಎಲ್ಲರ ಧಾರ್ಮಿಕ ಭಾವನೆಗಳನ್ನು ಗೌರವಿಸುತ್ತೇವೆ. ಬಿಹಾರದಲ್ಲಿ ಹಿಜಾಬ್ ವಿವಾದ ಇಲ್ಲ. ತರಗತಿಗಳಲ್ಲಿ ಅವರು ತಲೆ ಮೇಲೆ ಏನನ್ನಾದರೂ ಹಾಕಿಕೊಳ್ಳಲಿ ಅದನ್ನು ಪ್ರಶ್ನಿಸುವ ಅಗತ್ಯ ಇಲ್ಲ ಎಂದು ಬಿಹಾರ ಸಿಎಂ ನಿತೀಶ್‌ಕುಮಾರ್ ಯಾದವ್ ಹೇಳಿದ್ದಾರೆ.
ಪಾಟ್ನಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿವಾದ ಬಿಹಾರದ ವಿಷಯವಲ್ಲ. ನಾವು ಅಂತಹ ವಿಷಯಗಳ ಬಗ್ಗೆ ಗಮನಹರಿಸಬಾರದು. ಇದು ನಿಷ್ಪ್ರಯೋಜಕ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
ಬಿಹಾರದ ಶಾಲೆಗಳಲ್ಲಿ ಮಕ್ಕಳು ಬಹುತೇಕ ಒಂದೇ ರೀತಿಯ ಉಡುಗೆಯನ್ನು ಧರಿಸುತ್ತಾರೆ. ಯಾರಾದರೂ ತಲೆಗೆ ಏನಾದರೂ ಹಾಕಿಕೊಂಡರೆ ಅದಕ್ಕೆ ಕಾಮೆಂಟ್ ಮಾಡುವ ಅಗತ್ಯವಿಲ್ಲ. ಅಂತಹ ವಿಷಯಗಳಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ನಾವು ಪರಸ್ಪರ ಧಾರ್ಮಿಕ ಭಾವನೆಗಳನ್ನು ಗೌರವಿಸುತ್ತೇವೆ ಎಂದಿದ್ದಾರೆ.
PublicNext
15/02/2022 10:41 am