ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಯೋಧ್ಯೆಯಿಂದ ಅಂಜನಾದ್ರಿ ಬೆಟ್ಟಕ್ಕೆ ನೇರ ಸಾರಿಗೆ ಸಂಪರ್ಕ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ಹನುಮಂತನ ಜನ್ಮಸ್ಥಳ ಅಂಜನಾದ್ರಿ ಬೆಟ್ಟಕ್ಕೆ ಉತ್ತರ ಪ್ರದೇಶದ ಅಯೋಧ್ಯೆಯಿಂದ ವಿಮಾನ ಹಾಗೂ ರೈಲಿನ ಮೂಲಕ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಇದರ ಸಾಕಾರಕ್ಕಾಗಿ ಶೀಘ್ರದಲ್ಲಿ ಯೋಜನೆ ರೂಪಿಸಾಗುವುದು ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಇಂದು ವಿಧಾನಪರಿಷತ್ ಸದಸ್ಯ ರವಿಕುಮಾರ್‌ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹನುಮನ ಜನ್ಮಸ್ಥಳ ಅಂಜನಾದ್ರಿಯ ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು 100 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಮುಜರಾಯಿ ಇಲಾಖೆಯ ವತಿಯಿಂದ ಫೆಬ್ರವರಿ 22 ರಂದು ದೈವ ಸಂಕಲ್ಪ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯ ಅಡಿಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಭಕ್ತರನ್ನು ಸೆಳೆಯುವ ದೇವಸ್ಥಾನಗಳ ಸಮಗ್ರ ಅಭಿವೃದ್ದಿಗೆ ಮಾಸ್ಟರ್‌ ಪ್ಲಾನ್‌ ಮೂಲಕ ಅಭಿವೃದ್ದಿಗೊಳಿಸುವ ಯೋಜನೆ ಇದಾಗಿದೆ. ಈ ಯೋಜನೆಯ ಅಡಿಯಲ್ಲಿ ಅಂಜನಾದ್ರಿ ಬೆಟ್ಟವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. 13 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳುವ ನಿಟ್ಟಿನಲ್ಲಿ 5.50 ಕೋಟಿ ರೂಪಾಯಿಗಳ ಪ್ರಸ್ತಾವನೆ ನಮ್ಮ ಮುಂದಿದೆ ಎಂದು ಹೇಳಿದರು.

Edited By : Nagaraj Tulugeri
PublicNext

PublicNext

09/03/2022 05:56 pm

Cinque Terre

31.01 K

Cinque Terre

0

ಸಂಬಂಧಿತ ಸುದ್ದಿ