ನವದೆಹಲಿ: ರಾಜ್ಯದಲ್ಲಿ ಇರುವುದು ಆರ್‌ಎಸ್‌ಎಸ್ ಅಥವಾ ಬಜರಂಗ ದಳ ನೇತೃತ್ವದ ಸರ್ಕಾರವಲ್ಲ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ. ತಮ್ಮ ಸರ್ಕಾರದ ಮೇಲೆ ಯಾರ ಹಿಡಿತವೂ ಇಲ್ಲ ಎಂಬುದನ್ನು ಸಾಬೀತುಪಡಿಸಬೇಕು ಎಂದು ವಿಧಾನ ಪರಿಷತ್ ಸದದ್ಯ ಎಚ್. ವಿಶ್ವನಾಥ್ ಹೇಳಿದ್ದಾರೆ.
ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೆಲವು ಕೋಮು ಸೂಕ್ಷ್ಮ ವಿಚಾರಗಳ ಬಗ್ಗೆ ಚರ್ಚೆ ಹಾಗೂ ವಿವಾದಗಳು ಎದ್ದಿವೆ. ಹಿಜಾಬ್, ಹಲಾಲ್, ಟಿಪ್ಪು ಸುಲ್ತಾನ್ ಹಾಗೂ ಮತ್ತಿತರ ವಿಷಯಗಳ ಬಗ್ಗೆ ಸಮುದಾಯಗಳ ನಡುವೆ ಸಂಘರ್ಷ ನಡೆದಿದೆ. ಈ ಸ್ಥಿತಿಯಲ್ಲಿ ಸರ್ಕಾರ ಎಲ್ಲರ ನಡುವೆ ಸೌಹಾರ್ದ ತರುವತ್ತ ಕೆಲಸ ಮಾಡಬೇಕಿದೆ. ಹಿಂದೆ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಒಡೆದಾಳುವ ನೀತಿ ಅನುಸರಿಸಿರಲಿಲ್ಲ. ಹೀಗಾಗಿ ಯಡಿಯೂರಪ್ಪ ಅವರು ಕೂಡಲೇ ಮಧ್ಯ ಪ್ರವೇಶಿಸಿ ಪರಿಸ್ಥಿತಿ ಸರಿಪಡಿಸಬೇಕು ಎಂದು ವಿಶ್ವನಾಥ್ ಹೇಳಿದ್ದಾರೆ.
PublicNext
31/03/2022 06:21 pm