ಮುಂಬೈ: ರಾಜ್ಯದ ಎಲ್ಲ ಮಸೀದಿಗಳಲ್ಲಿರುವ ಧ್ವನಿವರ್ಧಕಗಳನ್ನು ತೆರವುಗೊಳಿಸಬೇಕು ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ಆಗ್ರಹಿಸಿರುವ ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ, ಮಸೀದಿಗಳ ಮುಂದೆ ಲೌಡ್ ಸ್ಪೀಕರ್‌ಗಳನ್ನು ಇರಿಸಲಾಗುವುದು ಮತ್ತು ಹನುಮಾನ್ ಚಾಲೀಸ ಮಂತ್ರ ಪಠಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಇದಾದ ಒಂದು ದಿನದ ನಂತರ, ಮುಂಬೈನ ಘಾಟ್‌ಕೋಪರ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ಭಾನುವಾರ 'ಹನುಮಾನ್ ಚಾಲೀಸಾ' ನುಡಿಸಿದ್ದಾರೆ.
ಮುಂಬೈನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ರಾಜ್ ಠಾಕ್ರೆ, "ನಾನು ಪ್ರಾರ್ಥನೆಗೆ ವಿರೋಧಿಯಲ್ಲ, ನೀವು ನಿಮ್ಮ ಮನೆಯಲ್ಲಿ ಪ್ರಾರ್ಥನೆ ಸಲ್ಲಿಸಬಹುದು. ಆದರೆ ಮಸೀದಿಯ ಧ್ವನಿವರ್ಧಕಗಳನ್ನು ತೆಗೆದುಹಾಕುವ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು. ಈ ಕುರಿತಾಗಿ ನಾನು ಅವರಿಗೆ ಎಚ್ಚರಿಕೆ ನೀಡುತ್ತೇನೆ. ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಿ. ಇಲ್ಲದಿದ್ದರೆ ಮಸೀದಿ ಮುಂದೆ ಧ್ವನಿವರ್ಧಕಗಳನ್ನು ಹಾಕಿ ಹನುಮಾನ್ ಚಾಲೀಸಾ ನುಡಿಸುತ್ತೇನೆ" ಎಂದು ಹೇಳಿದ್ದರು.
PublicNext
03/04/2022 10:39 pm