ಕಾರವಾರ: ಎಲ್ಲರೂ ಧ್ವನಿವರ್ದಕಗಳನ್ನು ಬಳಸುತ್ತಲಿದ್ದರೆ ಧರ್ಮ ಸಂಘರ್ಷಗಳು ಸೃಷ್ಟಿಯಾಗುತ್ತವೆ. ಮುಸ್ಲಿಮರು ಈ ಬಗ್ಗೆ ಚಿಂತನೆ ನಡೆಸಬೇಕು. ಮಸೀದಿಯೊಳಗಷ್ಟೇ ಶಬ್ದ ಕೇಳುವಂತೆ ಮಾಡಿಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ರಾಜ್ಯದ ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧ ವಿಚಾರದ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಮುಸ್ಲಿಮರು ಈ ಬಗ್ಗೆ ಚಿಂತನೆ ಮಾಡಬೇಕಾಗಿದೆ. ಮಸೀದಿಯೊಳಗೆ ಶಬ್ದ ಕೇಳುವಂತೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಧ್ವನಿವರ್ಧಕ ಬಳಸುತ್ತಾ ಹೋದರೆ ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತದೆ. ಮಂದಿರ, ಮಸೀದಿ, ಚರ್ಚ್‌ಗಳಲ್ಲಿ ಜೋರಾಗಿ ಧ್ವನಿವರ್ಧಕ ಹಾಕಿದ್ರೆ ವಿದ್ಯಾರ್ಥಿಗಳು ಓದಿಕೊಳ್ಳುವುದಕ್ಕೂ ಸಮಸ್ಯೆಯಾಗುತ್ತದೆ. ಹೀಗಾಗಿ ಮುಸ್ಲಿಮರು ಈ ಬಗ್ಗೆ ಚಿಂತನೆ ಮಾಡಬೇಕಾಗಿದೆ ಎಂದು ಹೇಳಿದರು. ಮುಂಚೆಯಿಂದಲೂ ಬಂದಂತಹ ಪದ್ಧತಿಯ ಮೂಲಕ ದೇವರ ಪ್ರಾರ್ಥನೆ ಮಾಡುತ್ತೇವೆ ಎನ್ನುವುದು ಮುಸ್ಲಿಮರ ವಾದ. ಅವರು ಮಸೀದಿಗಳಲ್ಲಿ ಜೋರಾಗಿ ಕೂಗ್ತಾರೆ. ಅದಕ್ಕೆ ಹನುಮಾನ್ ಚಾಲೀಸ ಮೈಕಿನಲ್ಲಿ ಹಾಕ್ಬೇಕು ಅಂತಾ ನಾವು ಸ್ಪರ್ಧೆ ಮಾಡಬಾರದು. ಮುಸ್ಲಿಂ ಸಮುದಾಯದ ಮುಖಂಡರು ಈ ಬಗ್ಗೆ ಚಿಂತನೆ ಮಾಡಿ ನಿರ್ಧರಿಸಬೇಕು ಎಂದರು.
PublicNext
04/04/2022 03:11 pm