ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ದತ್ತಾತ್ರೇಯ ಪೀಠದ ಆವರಣದಲ್ಲಿ ಮಾಂಸ ಭಕ್ಷಣೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಚಿಕ್ಕಮಗಳೂರು: ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಆವರಣದಲ್ಲಿ ಮಾಂಸಾಹಾರ ಸೇವನೆ ಮಾಡಿದ್ದನ್ನು ವಿರೋಧಿಸಿ ವಿಶ್ವ ಹಿಂದು ಹಾಗೂ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಪೀಠದ ಎದುರುಭಾಗದಲ್ಲಿ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ವಿವಾದಿತ ಸ್ಥಳದಲ್ಲಿ ನಡೆಸಿರುವ ಪೂಜೆ ಹಾಗೂ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಆವರಣದಲ್ಲಿ ಮಾಂಸಾಹಾರ ಭಕ್ಷಣೆಯ ವಿರುದ್ಧವಾಗಿ ಆಕ್ರೋಶ ಹೊರಹಾಕಿದ್ದಾರೆ.

ಹೈಕೋರ್ಟ್‌ನ ತೀರ್ಪು ಉಲ್ಲಂಘನೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಪ್ರತಿಭಟನಾನಿರತರ ಮನವೊಲಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಈ ಪ್ರತಿಭಟನೆಯಲ್ಲಿ ಬಜರಂಗದಳದ ದಕ್ಷಿಣ ಪ್ರಾಂತ ಸಂಯೋಜಕ ರಘು ಸಕಲೇಶಪುರ, ಜಿಲ್ಲಾ ಸಂಚಾಲಕ ಶಶಾಂಕ್ ಹೇರೂರು, ಮುಖಂಡ ಆರ್.ಡಿ ಮಹೇಂದ್ರ, ಶ್ಯಾಮ್ ವಿ ಗೌಡ, ಶಶಿ ಆಲ್ದೂರು ಭಾಗವಹಿಸಿದ್ದರು.

Edited By : Manjunath H D
PublicNext

PublicNext

16/05/2022 09:25 pm

Cinque Terre

100.63 K

Cinque Terre

4

ಸಂಬಂಧಿತ ಸುದ್ದಿ