ನಾಗಪುರ: ದಿನಕ್ಕೊಂದು ಮಸೀದಿ ವಿವಾದ ಸೃಷ್ಟಿಸಬೇಡಿ. ಇಲ್ಲಿರುವ ಮುಸ್ಲಿಮರು ಹೊರಗಿನವರಲ್ಲ. ಅವರು ಕೂಡ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಆರೆಸ್ಸೆಸ್ ತರಬೇತಿ ಶಿಬಿರದಲ್ಲಿ ಗುರುವಾರ ಸಂಜೆ ಮಾತನಾಡಿದ ಅವರು, ಅಯೋಧ್ಯೆ ರಾಮಮಂದಿರ ಹೋರಾಟದಲ್ಲಿ ಆರ್‌ಎಸ್‌ಎಸ್ ಭಾಗಿಯಾಗಿತ್ತು ನಿಜ. ಆದರೆ ಇನ್ನು ಮುಂದೆ ಇಂತಹ ಹೋರಾಟಗಳಲ್ಲಿ ಭಾಗಿ ಆಗಲ್ಲ. ಜ್ಞಾನವಾಪಿ ಮಸೀದಿ ವಿವಾದವನ್ನು ಹಿಂದೂ ಹಾಗೂ ಮುಸ್ಲಿಂ ಪಂಗಡಗಳು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಕೋರ್ಟ್ ಆದೇಶ ಪಾಲಿಸಬೇಕು ಎಂದು ಭಾಗವತ್ ಹೇಳಿದ್ದಾರೆ.
ಇತಿಹಾಸವನ್ನು ನಾವು ಮಾಡಿದ್ದಲ್ಲ. ಹಿಂದೂ-ಮುಸ್ಲಿಮರೂ ಅಲ್ಲ. ಇಸ್ಲಾಂ ಅರಸರು ದಂಡೆತ್ತಿ ಬಂದಾಗ ಜ್ಞಾನವಾಪಿ ನಿರ್ಮಾಣದಂಥ ಪ್ರಸಂಗ ಜರುಗಿವೆ. ಹಾಗಂತ ದಿನಕ್ಕೊಂದು ಮಸೀದಿ ವಿವಾದವನ್ನು ಯಾಕೆ ಸೃಷ್ಟಿಸಬೇಕು? ಮುಸ್ಲಿಮರ ದೇವರಾಧಾನೆ ಹೊರದೇಶದ ಪದ್ಧತಿ ಆಗಿದ್ದರೂ ಅವರು ಹೊರಗಿನವರಲ್ಲ. ಮುಸ್ಲಿಮರೂ ಕೂಡ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ ಎಂದು ಭಾಗವತ್ ಹೇಳಿದ್ದಾರೆ.
PublicNext
03/06/2022 12:09 pm