ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

15 ದಿನಗಳಲ್ಲಿ ರೆಡಿಯಾಗಲಿದೆ ಆಂಜನಾದ್ರಿ ಬೆಟ್ಟದ ಅಭಿವೃದ್ಧಿ ನೀಲನಕ್ಷೆ: ಸಚಿವ ಆನಂದ್ ಸಿಂಗ್

ಹೊಸಪೇಟೆ : ಅಂಜನೇಯ ಜನ್ಮಸ್ಥಳ ಅಂಜನಾದ್ರಿಯ ಬೆಟ್ಟದ ಸಮಗ್ರ ಅಭಿವೃದ್ಧಿಗೆ ನಮ್ಮ ಸರಕಾರ ವಿಶೇಷ ಮುತುವರ್ಜಿ ವಹಿಸಿದ್ದು, ಇದರ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಪರಿಣಿತ ವಾಸ್ತುಶಿಲ್ಪತಜ್ಞರಿಂದ 15 ದಿನದೊಳಗೆ ನೀಲನಕ್ಷೆ ಸಿದ್ದಪಡಿಸಲಾಗುವುದು ಎಂದು ಪ್ರವಾಸೋದ್ಯಮ,ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಆನಂದಸಿಂಗ್ ಅವರು ಹೇಳಿದರು.

ನಗರದ ಒಳಾಂಗಣ ಕ್ರೀಡಾಂಗಣ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಣಿತ ವಾಸ್ತುಶಿಲ್ಪ ತಜ್ಞರ ಏಜೆನ್ಸಿಯನ್ನು ಆಹ್ವಾನಿಸಿ ಅವರಿಂದ ನೀಲನಕ್ಷೆ ಸಿದ್ದಪಡಿಸಲಾಗುವುದು ಎಂದು ಹೇಳಿದ ಸಚಿವ ಸಿಂಗ್ ಅವರು ಶೌಚಾಲಯ,ಸ್ನಾನಗೃಹ, ಪಾರ್ಕಿಂಗ್, ಪ್ರವಾಸಿಗರ ಕೊಠಡಿ, ವಾಣಿಜ್ಯ ಮಳಿಗೆಗಳು ಸೇರಿದಂತೆ ಇನ್ನೀತರ ಸೌಕರ್ಯಗಳನ್ನು ಒಳಗೊಂಡ ನೀಲನಕ್ಷೆಯನ್ನು ಸಿದ್ದಪಡಿಸಲಾಗುವುದು ಮತ್ತು ಮೊದಲ ಹಂತದಲ್ಲಿ ಇವುಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ 100 ಕೋಟಿ ರೂ.ಗಳು ಮೀಸಲಿಟ್ಟಿದ್ದು, ಆ ಹಣವನ್ನು ಹಂತಹಂತವಾಗಿ ಹಣಕಾಸು ಇಲಾಖೆ ಒದಗಿಸಲಿದೆ;ಇನ್ನೂ ಹಣ ಅವಶ್ಯವಿದ್ದಲ್ಲಿ ಸರಕಾರ ಒದಗಿಸಲಿದೆ ಎಂದು ಅವರು ವಿವರಿಸಿದ ಸಚಿವ ಸಿಂಗ್ ಅವರು ಇದೇ 20 ರೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂಜನಾದ್ರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದರು.

Edited By : Nagaraj Tulugeri
PublicNext

PublicNext

14/07/2022 07:54 am

Cinque Terre

67.43 K

Cinque Terre

2

ಸಂಬಂಧಿತ ಸುದ್ದಿ