ಮಡಿಕೇರಿ: ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಾಟಿ ಕೋಳಿ ಸಾರು ತಿಂದು ದೇಗುಲಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗುವ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಈ ಮೂಲಕ ಕೊಡಗಿನಲ್ಲಿ ಮತ್ತೊಂದು ವಿವಾದಕ್ಕೆ ಅವರು ಸಿಲುಕಿದರಾ ಎನ್ನುವ ಅನುಮಾನಗಳು ಹುಟ್ಟಿಕೊಂಡಿವೆ.
ಸಿದ್ದರಾಮಯ್ಯ ಅವರು ಮಡಿಕೇರಿಯ ಅತಿಥಿ ಗೃಹದಲ್ಲಿ ಮಧ್ಯಾಹ್ನ ಕೋಳಿ ಸಾರು ಸವಿದಿದ್ದರು. ಬಳಿಕ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗುತ್ತಿದೆ.
PublicNext
21/08/2022 01:57 pm