ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇವಸ್ಥಾನಗಳ ಜಾಗ ಒತ್ತುವರಿ ಮಾಡಿದ್ರೆ ಕಟ್ಟುನಿಟ್ಟಿನ ಕ್ರಮ: ಜೊಲ್ಲೆ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ಅಡಿಯಲ್ಲಿರುವ ದೇವಸ್ಥಾನಗಳ ಭೂಮಿ ಒತ್ತುವರಿದಾರರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಾನ್ಯ ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ. ಇಂದು ವಿಧಾನಪರಿಷತ್ತಿನ ಪ್ರಶ್ನೋತ್ತರ ಕಾರ್ಯಕಲಾಪದಲ್ಲಿ ಸದಸ್ಯರಾದ ಎನ್‌ ರವಿಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸುವ ಸಂಧರ್ಭದಲ್ಲಿ ಈ ಮಾತುಗಳನ್ನು ಹೇಳಿದರು. ಬೆಂಗಳೂರು ನಗರ ತಿಗಳರ ಪೇಟೆಯಲ್ಲಿರುವ ಶ್ರೀ ಧರ್ಮರಾಯ ಸ್ವಾಮಿ ದೇವಾಲಯವು ಪ್ರವರ್ಗ “ಬಿ” ವರ್ಗದ ಧಾರ್ಮಿಕ ಸಂಸ್ಥೆಯಾಗಿರುತ್ತದೆ. ಪ್ರಸ್ತಾವಿತ ದೇವಾಲಯವು ಬೆಂಗಳೂರು ನಗರ ನೀಲಸಂದ್ರ ಗ್ರಾಮದ ಸರ್ವೇ ನಂ 79 ರಲ್ಲಿ 15 ಎಕರೆ 12 ಗುಂಟೆ ವಿಸ್ತೀರ್ಣ, ಹೊಂಗಸಂದ್ರ ಗ್ರಾಮದ ಸರ್ವೇ ನಂ. 33 ರಲ್ಲಿ 16 ಎಕರೆ 25 ಗುಂಟೆ ಜಮೀನು ಕಂದಾಯ ದಾಖಲಾತಿಯಂತೆ ದೇವಸ್ಥಾನದ ಹೆಸರಿನಲ್ಲಿದೆ ಎಂದು ಹೇಳಿದರು.

ಈ ಜಮೀನಿನಲ್ಲಿ ಅತಿಕ್ರಮವಾಗಿ 229 ಕುಟುಂಬಗಳು ಮನೆಗಳನ್ನು ನಿರ್ಮಿಸಿಕೊಂಡಿವೆ. ಇದಕ್ಕೆ ಸಂಬಂಧಪಟ್ಟಂತೆ 13 ಜನರ ವಿರುದ್ದ ಕರ್ನಾಟಕ ಭೂಕಬಳಿಕೆ ನಿಷೇದ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಅತಿಕ್ರಮಣಕಾರರ ಪರ ಸಲ್ಲಿಸಲಾಗಿದ್ದ ಬೆಂಗಳೂರಿನ 8ನೇ ಹೆಚ್ಚುವರಿ ಸಿಟಿ ಸಿವಿಲ್‌ ಜಡ್ಜ್‌ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣವು ವಜಾಗೊಂಡಿದ್ದು, ಅರ್ಜಿದಾರರು ಸರ್ವೋಚ್ಛ ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿದ್ದಾರೆ. ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಇಲಾಖೆಯ ವತಿಯಿಂದ ಸೂಕ್ತ ವಾದವನ್ನು ಮಂಡಿಸಲಾಗುತ್ತಿದೆ ಎಂದರು.

ನೀಲಸಂದ್ರ ಗ್ರಾಮದಲ್ಲಿನ ಅನಧಿಕೃತ ಅತಿಕ್ರಮಣಗಾರರನ್ನು ತೆರವುಗೊಳಿಸಿ 9 ಎಕರೆ ಜಮೀನಿಗೆ ಕಾಂಪೌಂಡ್‌ ನಿರ್ಮಿಸಲು ಈಗಾಗಲೇ 80 ಲಕ್ಷ ರೂಪಾಯಿಗಳನ್ನು ಜಿಲ್ಲಾಧಿಕಾರಿಗಳಿಗೆ ಮಂಜೂರು ಮಾಡಲಾಗಿದೆ. ಆದರೆ, ಈ ಕಾಮಗಾರಿಯನ್ನು ಕೈಗೊಳ್ಳುವ ಕೆಲವು ತಾಂತ್ರಿಕ ಅಡಚಣೆಗಳಿದ್ದು, ಕಂದಾಯ ಸಚಿವರ ಗಮನಕ್ಕೆ ಈ ವಿಷಯವನ್ನು ತಂದಿದ್ದು ಶೀಘ್ರದಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

Edited By : Nagaraj Tulugeri
PublicNext

PublicNext

14/09/2022 05:25 pm

Cinque Terre

23.9 K

Cinque Terre

1

ಸಂಬಂಧಿತ ಸುದ್ದಿ