ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಬಿ.ಶರತ್ ಅವರನ್ನ ಒಂದೇ ತಿಂಗಳಲ್ಲಿ ವರ್ಗಾವಣೆಗೊಳಿಸಿ ಅವರ ಜಾಗಕ್ಕೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶರತ್ ಒಂದು ತಿಂಗಳ ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಆದರೆ ಕಳೆದ ಒಂದು ತಿಂಗಳಿನಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿನ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಯಾವುದೇ ಪ್ಲಾನ್ ಮಾಡಿಕೊಂಡಿರಲಿಲ್ಲ. ಸಾವಿನ ಸಂಖ್ಯೆ, ಪಾಸಿಟಿವ್ ಸಂಖ್ಯೆ ಹೆಚ್ಚುತ್ತಿದ್ದರೂ ತಾತ್ಕಾಲಿಕವಾಗಿ ಆಸ್ಪತ್ರೆ ತೆರೆಯಲು ಜಿಲ್ಲಾಧಿಕಾರಿ ಶರತ್ ಮುಂದಾಗಿರಲಿಲ್ಲ. ಕೊರೊನಾ ಏರಿಕೆ ನಡುವೆ ಅತಿ ಸರಳ ದಸರಾ ಆಚರಣೆ ಸರ್ಕಾರಕ್ಕೆ ದೊಡ್ಡ ಸವಾಲು ಆಗಿದೆ. ಇದುವರೆಗೂ ಜಿಲ್ಲಾಧಿಕಾರಿ ದಸರಾ ಆಚರಣೆ ಯೋಜನೆಯನ್ನ ಸರ್ಕಾರಕ್ಕೆ ಸಲ್ಲಿಸದ ಹಿನ್ನೆಲೆ ಶರತ್ ಅವರ ವರ್ಗಾವಣೆ ಆಗಿದೆ ಎಂದು ತಿಳಿದು ಬಂದಿದೆ.
PublicNext
28/09/2020 07:43 pm