ನವದೆಹಲಿ: ಕಾಂಗ್ರೆಸ್‌ನ ವಕ್ತಾರ ರಣದೀಪ್ ಸುರ್ಜೇವಾಲಾ ಸೇರಿ ಕಾಂಗ್ರೆಸ್‌ನ 5 ಹಿರಿಯ ನಾಯಕರ ಟ್ವಿಟ್ಟರ್ ಖಾತೆ ಲಾಕ್ ಆಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೆಲವು ದಿನಗಳ ಹಿಂದೆ ಪೋಸ್ಟ್ ಮಾಡಿದ್ದ ಚಿತ್ರವೊಂದು ವಿವಾದ ಸೃಷ್ಟಿಸಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ಖಾತೆಯನ್ನು ಅಮಾನತುಗೊಳಿಸಲಾಗಿತ್ತು. ಈ ಬೆನ್ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಅಜಯ್ ಮಾಕೆನ್, ಮಾಣಿಕ್ಕಂ ಟಾಗೋರ್, ಜಿತೇಂದ್ರ ಸಿಂಗ್, ಸುಶ್ಮಿತಾ ದೇವ್ ಅವರ ಟ್ವಿಟ್ಟರ್ ಖಾತೆಯನ್ನು ಲಾಕ್ ಮಾಡಲಾಗಿದೆ.
ದಿಲ್ಲಿಯಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ದಲಿತ ಬಾಲಕಿಯ ಮನೆಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ಬಾಲಕಿಯ ಪೋಷಕರಿಗೆ ಸಮಾಧಾನ ಹೇಳುವ ಚಿತ್ರವನ್ನು ಹಂಚಿಕೊಂಡಿದ್ದರು. ಪೋಷಕರ ಚಿತ್ರವನ್ನು ಹಂಚಿಕೊಂಡಿರುವುದರಿಂದ ಬಾಲಕಿಯ ಗುರುತು ಬಹಿರಂಗವಾಗುವ ಅಪಾಯವಿದೆ. ಇದು ಪೋಕ್ಸೋ ಕಾಯ್ದೆ ಉಲ್ಲಂಘನೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್), ಟ್ವಿಟ್ಟರ್ ಹಾಗೂ ದಿಲ್ಲಿ ಪೊಲೀಸರಿಗೆ ಪತ್ರ ಬರೆದಿತ್ತು.
PublicNext
12/08/2021 11:02 am