ನವದೆಹಲಿ: ಹೈಸ್ಪೀಡ್ ಇಂಟರ್ನೆಟ್ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಈ ಮೂಲಕ ಇಂದಿನಿಂದ ಭಾರತವು ಇಂಟರ್ನೆಟ್ ನ 5G ಯುಗವನ್ನು ಪ್ರವೇಶಿಸಿದೆ. ಇನ್ಮುಂದೆ ಜನರು ಎದುರಿಸುತ್ತಿರುವ ಇಂಟರ್ನೆಟ್ ಸಮಸ್ಯೆಗಳಿಗೆ ಇನ್ನು ಪರಿಹಾರ ಸಿಗಲಿದೆ. ಇಂದು ಅಕ್ಟೋಬರ್ 1 ದೆಹಲಿಯ ಪ್ರಗತಿ ಮೈದಾನದಲ್ಲಿ ಮೋದಿ 5G ಸೇವೆಗೆ ಚಾಲನೆ ನೀಡಿದ್ದಾರೆ.
ಇದರೊಂದಿಗೆ ದೇಶದಲ್ಲಿ ಹೈಸ್ಪೀಡ್ ಇಂಟರ್ನೆಟ್ ಬಳಕೆ ಆರಂಭವಾಗಿದೆ. ಜಿಯೋ, ಏರ್ಟೆಲ್ ಮುಂದಿನ ದಿನಗಳಲ್ಲಿ 5ಜಿ ಸೇವೆಯನ್ನು ತನ್ನ ಗ್ರಾಹಕರಿಗೆ ಒದಗಿಸಲಿದೆ.
PublicNext
01/10/2022 11:35 am