ನವದೆಹಲಿ: ದೇಶದ ಅತ್ಯುನ್ನತ ಕ್ರೀಡಾ ಪುರಸ್ಕಾರವಾದ 'ರಾಜೀವ್ ಗಾಂಧಿ ಖೇಲ್ ರತ್ನ' ಪ್ರಶಸ್ತಿಯ ಹೆಸರು ಬದಲಾವಣೆ ಮಾಡಲಾಗಿದೆ. ಈ ಅತ್ಯುನ್ನತ ಪುರಸ್ಕಾರಕ್ಕೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ’ ಎಂದು ಮರುನಾಮಕರಣ ಮಾಡಲಾಗಿದೆ.
ಈ ಕುರಿತು ಶುಕ್ರವಾರ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಜನರ ಅಭಿಪ್ರಾಯಗಳಿಗಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ. ಮೇಜರ್ ಧ್ಯಾನ್ ಚಂದ್ ಭಾರತದ ಅಗ್ರಗಣ್ಯ ಕ್ರೀಡಾಪಟುಗಳಲ್ಲಿ ಒಬ್ಬರಾಗಿದ್ದು, ಭಾರತಕ್ಕೆ ಗೌರವ ಹಾಗೂ ಹೆಮ್ಮೆಯನ್ನು ತಂದಿದ್ದಾರೆ. ನಮ್ಮ ರಾಷ್ಟ್ರದ ಅತ್ಯುನ್ನತ ಕ್ರೀಡಾ ಗೌರವವನ್ನು ಅವರ ಹೆಸರಿಗೆ ಇಡುವುದು ಸೂಕ್ತ" ಎಂದು ತಿಳಿಸಿದ್ದಾರೆ.
PublicNext
06/08/2021 01:07 pm