ಬೆಂಗಳೂರು: ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ U-20 ಬೆಳ್ಳಿ ಗೆದ್ದ ಕರ್ನಾಟಕದ ಪ್ರಿಯಾ ಮೋಹನ್ ಅವರಿಗೆ ರಾಜ್ಯ ಸರಕಾರದಿಂದ 5 ಲಕ್ಷ ನಗದು ಪುರಸ್ಕಾರ ನೀಡಲಾಗುವುದೆಂದು ಯುವಜನ ಸೇವೆ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಹೇಳಿದ್ದಾರೆ.
ಸದ್ಯ ಕೊಲಂಬಿಯಾದಲ್ಲಿ ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಶಿಪ್ ನಡೆಯುತ್ತಿದೆ. ಇದರಲ್ಲಿ ಭರತ್ ಶ್ರೀಧರ್, ರೂಪಾಲ್ ಚೌಧರಿ ಮತ್ತು ಕಪಿಲ್ ಅವರನ್ನೊಳಗೊಂಡ ಮಿಕ್ಸಡ್ ರಿಲೇ ತಂಡ ಉತ್ತಮ ಪ್ರದರ್ಶನ ತೋರಿಸಿದ್ದು, ಕೂದಲೆಳೆ ಅಂತದರಲ್ಲಿ ಚಿನ್ನದ ಪದಕ ಕೈ ತಪ್ಪಿದೆ.
ಕಳೆದ ವರ್ಷ ಕಂಚಿನ ಪದಕದ ಸಾಧನೆ ಮಾಡಿದ್ದ ಭಾರತದ ರಿಲೇ ತಂಡ ಈ ಬಾರಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದೆ. ಸ್ವಲ್ಪದರಲ್ಲೆ ಚಿನ್ನದ ಪದಕ ಕೈ ತಪ್ಪಿದ್ದು, ಮುಂದಿನ ಸಲ ಚಿನ್ನದ ಪದಕ ಗೆಲ್ಲುವ ವಿಶ್ವಾಸವಿದ್ದು, ಅತ್ಯುತ್ತಮ ಸಾಧನೆ ಮಾಡಿರುವ ರಿಲೇ ತಂಡಕ್ಕೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ. ಭಾರತ ತಂಡವನ್ನು ಪ್ರತಿನಿಧಿಸಿದ್ದ ಕರ್ನಾಟಕದ ಪ್ರಿಯಾ ಮೋಹನ್ ಅವರಿಗೆ 5 ಲಕ್ಷ ನಗದು ಪುರಸ್ಕಾರ ನೀಡುವುದಾಗಿ ಸಚಿವ ಡಾ.ನಾರಾಯಣಗೌಡ ಘೋಷಿಸಿದ್ದಾರೆ.
PublicNext
03/08/2022 03:36 pm