ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಸೇರಿದಂತೆ ಬಹುತೇಕ ಎಲ್ಲಾ ಪ್ರದೇಶಗಳನ್ನು ತಾಲಿಬಾನ್ ವಶಪಡಿಸಿಕೊಂಡಿದೆ. ಆದರೆ ಪಂಜ್‌ಶೀರ್‌ನಲ್ಲಿ ಮಾತ್ರ ಅಫ್ಘಾನ್ ಯೋಧರು ತಾಲಿಬಾನಿಗಳನ್ನು ಹೊಡೆದುರುಳಿದಿ ಇನ್ನೂ ತಮ್ಮದೇ ಅಧಿಕಾರ ಉಳಿಸಿಕೊಂಡಿದ್ದಾರೆ.
ಇದೀಗ ಅಫ್ಘಾನಿಸ್ತಾನ ಉಪಾಧ್ಯಕ್ಷ ಅಮರುಲ್ಲಾ ಸಲೇಹ್ ಅವರು ಪಂಜ್ ಶೀರ್ ಪ್ರಾಂತ್ಯದಲ್ಲಿ ವಾಲಿಬಾಲ್ ಆಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ತಾಲಿಬಾನ್ ವಿರೋಧಿ ಪಡೆಯ ಯೋಧರು ಪಂಜ್ ಶೀರ್ ಪ್ರಾಂತ್ಯವನ್ನು ವಶಕ್ಕೆ ತೆಗೆದುಕೊಳ್ಳಲು ಬಂದ ನೂರಾರು ತಾಲಿಬಾನಿ ಬಂಡುಕೋರರನ್ನು ಹೊಡೆದುರುಳಿಸಿದ ಬೆನ್ನಲ್ಲೇ ಇತ್ತ ತಾಲಿಬಾನಿ ಮುಖಂಡರು ತಮ್ಮ ನೂರಾರು ಪಡೆಗಳನ್ನು ಪಂಜ್ ಶೀರ್ ನತ್ತ ರವಾನಿಸುತ್ತಿದ್ದಾರೆ.
ಅಂದ್ರಾಬ್ ಪ್ರಾಂತ್ಯದಲ್ಲಿ ಉಗ್ರರಿಂದ ಮನೆ ಮನೆ ಶೋಧವಾಗುತ್ತಿರುವ ಹೊತ್ತಿನಲ್ಲೇ ಆಫ್ಘನ್‌ನ ಮಾಜಿ ಉಪಾಧ್ಯಕ್ಷ, ಹಂಗಾಮಿ ಅಧ್ಯಕ್ಷ ಅಮರುಲ್ಲಾ ಸಲೇಹ್ ಟ್ವೀಟ್ ಮಾಡಿ, ದೇವರಿಗೆ ಮಾತ್ರ ನನ್ನನ್ನು ಇಲ್ಲಿಂದ ತೆರವುಗೊಳಿಸಲು ಸಾಧ್ಯ. ಆದರೆ ನನ್ನ ದೇಹ ಈ ಮಣ್ಣಿನಲ್ಲಿ ಐಕ್ಯವಾಗುತ್ತೆ ಎಂದು ಹೇಳಿದ್ದಾರೆ. ಅಫ್ಘಾನಿಸ್ತಾನ ಮತ್ತು ನಾನು ಒಂದೇ. ಇಲ್ಲಿಂದ ಹೊರದಬ್ಬಲು ಯಾರಿಂದಲೂ ಆಗದು, ನಾನು ಕೂಡಾ ಹೊರಗೆ ಹೋಗಲಾರೆ. ಈ ಮಣ್ಣಿನಲ್ಲೇ ನನ್ನ ದೇಹ ಮಣ್ಣಾಗಿ ಹೋಗಲಿ ಎನ್ನುವ ಮೂಲಕ ಉಗ್ರರಿಗೆ ಹೆದರುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.
PublicNext
24/08/2021 09:08 am