ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯುಗಪುರುಷ ಮೋದಿ ಹೆಸರನ್ನು ಕ್ರೀಡಾಂಗಣಕ್ಕೆ ನಾಮಕರಣ ಮಾಡಿದ್ದು ತಪ್ಪಲ್ಲ: ಬಾಬಾ ರಾಮ್ ದೇವ್

ಹರಿದ್ವಾರ: ವಿಶ್ವದ ಅತಿದೊಡ್ಡ ಕ್ರೀಡಾಂಗಣ ಎಂಬ ಶ್ರೇಯ ಹೊಂದಿರುವ ಅಹಮದಾಬಾದ್ ನ ನವೀಕೃತ ಸರ್ದಾರ್ ಪಟೇಲ್ ಕ್ರೀಡಾಂಗಣವನ್ನು ಬುಧವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಉದ್ಘಾಟಿಸಿದ್ದರು. ಕ್ರೀಡಾಂಗಣಕ್ಕೆ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಿರುವುದಕ್ಕೆ ಟೀಕೆಗಳು ಕೇಳಿಬಂದಿದ್ದವು.

ಇದರ ಮಧ್ಯೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಯೋಗ ಗುರು ಬಾಬಾ ರಾಮ್ ದೇವ್ ಪ್ರಧಾನಿ ನರೇಂದ್ರ ಮೋದಿ ಒಬ್ಬ ಯುಗಪುರುಷ. ಕ್ರೀಡಾಂಗಣಕ್ಕೆ ಅವರ ಹೆಸರಿಡುವುದರಲ್ಲಿ ತಪ್ಪಿಲ್ಲ ಎಂದು ಹೇಳಿದ್ದಾರೆ.

'ಹಿಂದಿನ ಕಟ್ಟಡಗಳು ಮತ್ತು ಸ್ಮಾರಕಗಳಿಗೆ ಆ ಕಾಲದ ಪ್ರಮುಖ ವ್ಯಕ್ತಿಗಳ ಹೆಸರಿಡಬಹುದಾಗಿದ್ದರೆ, ವರ್ತಮಾನ ಕಾಲದ ಖ್ಯಾತ ವ್ಯಕ್ತಿ ಹಾಗೂ ಯುಗಪುರುಷರಾಗಿರುವ ಮೋದಿ ಅವರ ಹೆಸರನ್ನು ಕ್ರೀಡಾಂಗಣಕ್ಕೆ ಇಡಬಾರದೇಕೆ' ಎಂದು ಪ್ರಶ್ನಿಸಿದ್ದಾರೆ.

ಕ್ರಿಕೆಟ್ ಕ್ರೀಡಾಂಗಣಕ್ಕೆ ಮೋದಿ ಹೆಸರಿಡುತ್ತಿದ್ದಂತೆ ಇದಕ್ಕೆ ರಾಜಕೀಯ ವಲಯದಲ್ಲಿ ಟೀಕೆಗಳು ಕೇಳಿಬಂದಿದ್ದವು. ದೇಶಕ್ಕೇ ಮೋದಿ ಹೆಸರಿಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರಾಮ್ ದೇವ್, ಇದು ಕೇವಲ ರಾಜಕೀಯ ಪ್ರೇರಿತ ಹೇಳಿಕೆಯಷ್ಟೆ, ಅದಕ್ಕಿಂತ ಹೆಚ್ಚಿನದ್ದೇನಿಲ್ಲ ಎಂದು ಹೇಳಿದ್ದಾರೆ.

Edited By : Nirmala Aralikatti
PublicNext

PublicNext

26/02/2021 08:02 am

Cinque Terre

75 K

Cinque Terre

29

ಸಂಬಂಧಿತ ಸುದ್ದಿ