ಹೈದರಾಬಾದ್: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಅವರಿಗೆ ಆಂಧ್ರ ಪ್ರದೇಶ ಸರ್ಕಾರವು 30 ಲಕ್ಷ ರೂಪಾಯಿ ಗೌರವ ಧನ ಘೋಷಣೆ ಮಾಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ, ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಕಂಚಿನ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಅವರಿಗೆ ಅಭಿನಂದನೆಗಳು. ಅವರು ಕಂಚಿನ ಪದಕ ಗೆದ್ದ ಹಿನ್ನೆಲೆಯಲ್ಲಿ ಅವರಿಗೆ ರಾಜ್ಯ ಕ್ರೀಡಾ ಯೋಜನೆ ಅನುಸಾರ 30 ಲಕ್ಷ ರೂಪಾಯಿ ಗೌರವ ಧನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
PublicNext
03/08/2021 02:50 pm