ಟೋಕಿಯೋ: ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದ ಭಾರತದ ಪುರುಷರ ಹಾಕಿ ತಂಡದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಫೋನ್ ಮೂಲಕ ಮಾತನಾಡಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.
ಹಾಕಿ ತಂಡದ ನಾಯಕ ಮನ್ಪ್ರೀತ್ ಜತೆ ದೂರವಾಣಿಯಲ್ಲಿ ಮಾತಾಡಿದ ಪ್ರಧಾನಿ ಮೋದಿ, ಇಂದು ನಡೆದ ಮಹತ್ವದ ಪಂದ್ಯದಲ್ಲಿ ಜರ್ಮನಿ ವಿರುದ್ಧ 5-4 ಗೋಲುಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡಕ್ಕೆ ಧನ್ಯವಾದಗಳು ತಿಳಿಸಿದರು. 41 ವರ್ಷಗಳ ಬಳಿಕ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ ಭಾರತ ತಂಡಕ್ಕೆ ಅಭಿನಂದನೆಗಳು ಎಂದರು.
PublicNext
05/08/2021 02:01 pm